ETV Bharat / state

ಸೆ. 14-15 ರಂದು ಮಂಡ್ಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ; 2 ದಿನವೂ ಉಚಿತ ಊಟದ ವ್ಯವಸ್ಥೆ - Gaganachukki Waterfall Festival

author img

By ETV Bharat Karnataka Team

Published : Sep 7, 2024, 7:16 AM IST

Updated : Sep 7, 2024, 7:45 AM IST

ಮಂಡ್ಯ ಜಿಲ್ಲೆಯಲ್ಲಿ ಇದೇ ತಿಂಗಳ 14 ಹಾಗೂ 15ರಂದು ಗಗನಚುಕ್ಕಿ ಜಲಪಾತೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಎರಡು ದಿನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವಕ್ಕೆ ಬರುವ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ.

ಸೆ. 14-15ಕ್ಕೆ ಮಂಡ್ಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ
ಸೆ. 14-15ಕ್ಕೆ ಮಂಡ್ಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ (ETV Bharat)
ಗಗನಚುಕ್ಕಿ ಜಲಪಾತೋತ್ಸವ ಕುರಿತು ಡಿಸಿ ಹಾಗೂ ಶಾಸಕರಿಂದ ಮಾಹಿತಿ (ETV Bharat)

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್​ 14 ಹಾಗೂ 15ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌. ನರೇಂದ್ರಸ್ವಾಮಿ ಅವರು ಹೇಳಿದರು.

ಗಗನಚುಕ್ಕಿ ಜಲಪಾತ
ಗಗನಚುಕ್ಕಿ ಜಲಪಾತ (ETV Bharat)

ಶುಕ್ರವಾರ ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಸೆಪ್ಟೆಂಬರ್​ 14ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಸರ್ ಹಾಗೂ ಲೈಟಿಂಗ್​​ಗಳನ್ನು ಸಹ ಉದ್ಘಾಟಿಸಲಿದ್ದಾರೆ ಎಂದರು. ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಎರಡು ದಿನಗಳ ಕಾಲ ನಡೆಯುವ ಈ ಗಗನಚುಕ್ಕಿ ಜಲಪಾತೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ" ಎಂದು ಮಾಹಿತಿ ನೀಡಿದರು.

ಗಗನಚುಕ್ಕಿ ಜಲಪಾತ
ಗಗನಚುಕ್ಕಿ ಜಲಪಾತ (ETV Bharat)
ಸೆ. 14-15 ರಂದು ಮಂಡ್ಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ
ಸೆ. 14-15 ರಂದು ಮಂಡ್ಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ (ETV Bharat)

"ಪರಿಸರದ ಸೌಂದರ್ಯ ಸವಿಯುವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಗ್ಗೆಯಿಂದ ರಾತ್ರಿಯವರೆಗೆ ಇರುತ್ತವೆ. ಗಗನ ಚುಕ್ಕಿಯನ್ನು ಬೃಹತ್ ಆಕರ್ಷಣೀಯ ಕೇಂದ್ರವನ್ನಾಗಿಸಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಇಲ್ಲಿ ಸಿಗುವ ಸೌಲಭ್ಯದೊಂದಿಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ ಹಲವಾರು ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಏಷ್ಯಾದಲ್ಲೇ ಮೊದಲು ಜಲ ವಿದ್ಯುತ್ ಉತ್ಪಾದನೆ ಮಾಡಿದ ಹೆಗ್ಗಳಿಕೆ ಶಿವನಸಮುದ್ರ ವಿದ್ಯುತ್ ಕೇಂದ್ರಕ್ಕೆ ಸಲ್ಲುತ್ತದೆ. ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳಲ್ಲಿ ಇರುವ ಪ್ರವಾಸಿ ಸ್ಥಳಗಳ ಪ್ರವಾಸಿ ಸರ್ಕೂಟ್ ರಚಿಸಬೇಕು. ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸಾಕು ಪ್ರಣಿಗಳ ಪ್ರಾಣಿ ಸಂಗ್ರಾಹಾಲಯ, ಸುತ್ತ ವಾರ್ಕಿಂಗ್ ಪಾಥ್ ನಿರ್ಮಿಸಲು ಚಿಂತಿಸಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು" ಎಂದು ಶಾಸಕರು ತಿಳಿಸಿದರು.

ಗಗನಚುಕ್ಕಿ ಜಲಪಾತ
ಗಗನಚುಕ್ಕಿ ಜಲಪಾತ (ETV Bharat)

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, "ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದೆ. ಬೆಳಗಿನ ಕಾರ್ಯಕ್ರಮವನ್ನು ಸ್ಥಳೀಯ ಕಲಾವಿದರಿಗೆ ನೀಡಲಾಗಿದೆ. ಜಲಪಾತೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15 ರಂದು ಕಾರ್ಯಕ್ರಮ ನೀಡಲಿದ್ದಾರೆ".

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ. (ETV Bharat)

"ಸೆಪ್ಟೆಂಬರ್ 14 ರಂದು ಶನಿವಾರ ಬೆಳಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು. ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ. ಸಂಜೆ 7 ಗಂಟೆಯಿಂದ ರಾತ್ರಿ 10.30ರ ವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ. 15 ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ. ಸಂಜೆ 4.30 ರಿಂದ 6 ಗಂಟೆವರೆಗೆ ಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ. 6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ಜರುಗಲಿವೆ" ಎಂದು ಜಿಲ್ಲಾಧಿಕಾರಿ ಸಂಪೂರ್ಣ ಮಾಹಿತಿ ನೀಡಿದರು.

ಇದನ್ನೂ ಓದಿ: ಶ್ರೀಕೃಷ್ಣ ದೇವರಾಯ ವಿವಿಯಿಂದ ಹಿರಿಯ ನಟಿ ಉಮಾಶ್ರೀ ಸೇರಿ ಮೂವರಿಗೆ ಗೌರವ ಡಾಕ್ಟರೇಟ್​ - honorary doctorate to umashree

Last Updated : Sep 7, 2024, 7:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.