ETV Bharat / state

ಸುವರ್ಣಸೌಧದಲ್ಲಿ 'ಗಾಂಧಿ ಭಾರತ' ಲಾಂಛನ ಅನಾವರಣ: ಡಿ.26ರಿಂದ ಕಾರ್ಯಕ್ರಮಕ್ಕೆ ಚಾಲನೆ - GANDHI BHARAT

ಡಿಸೆಂಬರ್ 26 ಹಾಗೂ 27ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 2025 ಅಕ್ಟೋಬರ್​​ 2ರವರೆಗ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸುವರ್ಣಸೌಧದಲ್ಲಿ 'ಗಾಂಧಿ ಭಾರತ' ಲಾಂಛನ ಅನಾವರಣ
ಸುವರ್ಣಸೌಧದಲ್ಲಿ 'ಗಾಂಧಿ ಭಾರತ' ಲಾಂಛನ ಅನಾವರಣ (ETV Bharat)
author img

By ETV Bharat Karnataka Team

Published : Dec 9, 2024, 9:30 PM IST

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸುವರ್ಣಸೌಧದಲ್ಲಿ 'ಗಾಂಧಿ ಭಾರತ' ಕಾರ್ಯಕ್ರಮದ ಲಾಂಛನ ಅನಾವರಣಗೊಳಿಸಿದರು.

ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಮುಂಬರುವ 2025ರ ಅಕ್ಟೋಬರ್ 2ರವರೆಗೆ ರಾಜ್ಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು, ಹೋರಾಟ, ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ, ಸತ್ಯ, ಅಹಿಂಸೆ, ಆರ್ಥಿಕ ಚಿಂತನೆಗಳು, ಸ್ವರಾಜ್, ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.

ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಬಸವರಾಜ ರಾಯರೆಡ್ಡಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿ ಇತರೆ ಗಣ್ಯರು ಇದ್ದರು.

ಇದೇ ತಿಂಗಳು 26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಹಾಗೂ ಬೃಹತ್ ಸಾರ್ವಜನಿಕ ಸಭೆ ಮಾಡಲಾಗುವುದು. ಇಡೀ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದು ಬೆಳಕವಾಡಿಯ ವೀರಸೌಧದ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಎಲ್ಲೆಲ್ಲಿ ಸಭೆ ಮಾಡಬಹುದು ಎಂದು ಮೂರು ನಾಲ್ಕು ಜಾಗಗಳನ್ನು ನಾವು ಗುರುತಿಸುತ್ತಿದ್ದೇವೆ. ನಾಳೆ ನಾಡಿದ್ದು ನಮ್ಮ ರಾಷ್ಟ್ರೀಯ ನಾಯಕರು ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಈ ಕಾರ್ಯಕ್ರಮಗಳ ರೂಪುರೇಷೆ ಮಾಡಲು ಹೆಚ್.ಕೆ.ಪಾಟೀಲ್, ವೀರಪ್ಪ ಮೋಯ್ಲಿ ಹಾಗೂ ಬಿ.ಎಲ್.ಶಂಕರ್ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ನೂರು ವರ್ಷದ ಸಂಭ್ರಮವನ್ನು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದಿಂದ 'ಗಾಂಧಿಭಾರತ' ಎಂಬ ಕಾರ್ಯಕ್ರಮದಡಿ ವರ್ಷಪೂರ್ತಿ ಆಚರಣೆಗೆ ಮುಂದಾಗಿದ್ದೇವೆ. ಗಾಂಧಿ ಭಾರತದ ಚಿಹ್ನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣ ಮಾಡಿದ್ದಾರೆ. ನೂರು ವರ್ಷದ ಹಿಂದೆ ಮಹಾತ್ಮಾ ಗಾಂಧೀಜಿ ಅವರು ಅಲಂಕರಿಸಿದ ಸ್ಥಾನದಲ್ಲಿ ಈಗ ನಮ್ಮದೇ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸುವ ಆಲೋಚನೆ ಇತ್ತು. ಸಮಯ ಹಾಗೂ ಭದ್ರತೆಯ ವಿಚಾರಗಳಿವೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಅಶೋಕ್, ಅಶ್ವತ್ಥ ನಾರಾಯಣ, ಯತ್ನಾಳ್ ನೀವೂ ಶೂದ್ರರೇ: ಜಾತಿ ವ್ಯವಸ್ಥೆ ಬಗ್ಗೆ ಸದನದಲ್ಲಿ ಸಿಎಂ ಪಾಠ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.