ETV Bharat / state

ಗಾಂಧಿಯವರ ಸರ್ವೋದಯ, ಅಂಬೇಡ್ಕರರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ - Gandhi Jayanti - GANDHI JAYANTI

ಬೆಂಗಳೂರಿನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

CM SIDDARAMAIAH  SWACHHATA ANDOLAN PLEDGE CEREMONY  BENGALURU
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್​ ಶಾಸ್ತ್ರಿ ಜಯಂತಿ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Oct 2, 2024, 2:03 PM IST

ಬೆಂಗಳೂರು: ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಬಿಬಿಎಂಪಿ ವತಿಯಿಂದ ಇಂದು ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿದರು. ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡರು. ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ನಂತರ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947ರಲ್ಲಿ ಬ್ರಿಟಿಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ. ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಹೇಳಿದರು.

CM Siddaramaiah  Swachhata Andolan Pledge Ceremony  Bengaluru
ಗಾಂಧಿ ಜಯಂತಿ ಕಾರ್ಯಕ್ರಮ (ETV Bharat)

ಆತ್ಮಸಾಕ್ಷಿಯ ನ್ಯಾಯಾಲಯ : ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧದ ಮುಂದಿನ ಮೆಟ್ಟಿಲುಗಳ ಬಳಿ "ಕಿತ್ತೂರು ವಿಜಯೋತ್ಸವದ ಜ್ಯೋತಿ"ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ.

ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ (ETV Bharat)

ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ ಎಂದರು.

ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರ್​ ಶಾಸ್ತ್ರಿ ಅವರ ಜನುಮ ದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. 1920ರಿಂದ 1947ರ ವರೆಗಿನ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದು ವಿವರಿಸಿದರು.

ಸಿಎಂ ಬಟ್ಟೆಗೆ ಕಿಡಿ: ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಣ್ಣ ಅವಘಡ ಸಂಭವಿಸಿತು. ಸಿಎಂ ಬಟ್ಟೆಗೆ ಬೆಂಕಿಯ ಕಿಡಿ ತಾಕಿದ ಘಟನೆ ನಡೆಯಿತು. ಜ್ಯೋತಿ ಬೆಳಗುವ ವೇಳೆ ಈ ಘಟನೆ ನಡೆದಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಎಚ್ಚೆತ್ತು ಕಿಡಿಯನ್ನು ಆರಿಸಿದರು.‌

ಓದಿ: ಗಾಂಧೀಜಿಗೂ ಬೆಳಗಾವಿಗೂ ಇದೆ ವಿಶೇಷ ನಂಟು: ಕುಂದಾನಗರಿಗೆ ಬಾಪೂಜಿ ಬಂದಿದ್ದು ಎಷ್ಟು ಬಾರಿ ಗೊತ್ತಾ? - Gandhiji Belagavi Relation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.