ETV Bharat / state

ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವರ್ಷವಿಡೀ ಶತಮಾನೋತ್ಸವ ಕಾರ್ಯಕ್ರಮ, ಸಚಿವ ಪಾಟೀಲ್ - CONGRESS SESSION CENTENARY

ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ ಮಾಡಲಾಗುತ್ತಿದ್ದು, ಈ ನಿಮಿತ್ತ ವರ್ಷವಿಡೀ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದರು.

Gandhiji statue to be unveiled at Suvarna Vidhana Soudha on December 27: Minister HK Patil
ಸಮಾರಂಭದ ಪೂರ್ವಸಿದ್ಧತೆಗಳ ಪರಿಶೀಲನೆಯಲ್ಲಿ ಸಚಿವರು (ETV Bharat)
author img

By ETV Bharat Karnataka Team

Published : Dec 25, 2024, 5:29 PM IST

ಬೆಳಗಾವಿ: ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವ ಹೆಚ್​. ಕೆ. ಪಾಟೀಲ್​ ತಿಳಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು‌ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ‌ ಸುಧಾರಣೆಯ ಅಸ್ತ್ರವಾಗಿತ್ತು ಎಂದರು.

Gandhiji statue to be unveiled at Suvarna Vidhana Soudha on December 27: Minister HK Patil
ಸಮಾರಂಭದ ಪೂರ್ವಸಿದ್ಧತೆಗಳ ಪರಿಶೀಲನೆಯಲ್ಲಿ ಸಚಿವರು (ETV Bharat)

ಸಮಾಜದಲ್ಲಿನ‌ ಅಸ್ಪೃಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು. 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವರು ಹೇಳಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸುವರ್ಣ ಸೌಧದಲ್ಲಿನ ಮಹಾತ್ಮ ಗಾಂಧೀಜಿ ಅವರ ಬೃಹತ್ ಪ್ರತಿಮೆಯನ್ನು ಡಿ.27 ರಂದು ಮುಂಜಾನೆ 10 ಗಂಟೆಗೆ ಅನಾವರಣಗೊಳಿಸಲಾಗುವುದು. ಈ ಬೃಹತ್ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ್ಯ ಹೋರಾಟಗಾರರನ್ನು ಆಹ್ವನಿಸಲಾಗಿದೆ. ಡಿ.26ರಂದು ನಗರದ‌ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಹೆಚ್. ಕೆ. ಪಾಟೀಲ ಅವರು ಮಾಹಿತಿ ನೀಡಿದರು.

ಈ ವೇಳೆ ಮಾಜಿ‌ ಮುಖ್ಯ ಮುಖ್ಯಮಂತ್ರಿ ವೀರಪ್ಪ‌ ಮೊಯ್ಲಿ, ಮಾಜಿ ಸಭಾಪತಿ ಬಿ. ಎಲ್. ಶಂಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಗಾಂಧೀಜಿ ಪುತ್ಥಳಿ ಉದ್ಘಾಟನೆಗೆ ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ಆಹ್ವಾನ - CONGRESS SESSION CENTENARY PROGRAM

ETV Bharat Logo

Copyright © 2025 Ushodaya Enterprises Pvt. Ltd., All Rights Reserved.