ಪುತ್ತೂರು(ದಕ್ಷಿಣ ಕನ್ನಡ): ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58ನೇ ವರ್ಷದ ಗಣೇಶೋತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಮಾಡಿದರು.
ಬೆಳಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ಬೃಹತ್ ಚಪ್ಪರದಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಕಾರ್ಯ ನಡೆಯಿತು. ಬಳಿಕ ಸಭಾ ವೇದಿಕೆ ಬಳಿ ಭಗವಾ ಧ್ವಜಾರೋಹಣವನ್ನು ವಿವೇಕಾನಂದ ಪದವಿ ಪೂರ್ವಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ ಅವರು ನೆರವೇರಿಸಿದರು.
ಈ ಸಂದರ್ಭ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ಮಾಜಿ ಶಾಸಕ ಸಂಜೀವ, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ ಸೇರಿದಂತೆ ಹಲವು ಈ ವೇಳೆ ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಕಿಲ್ಲೆ ಮೈದಾನ, ಶ್ರೀ ದೇವತಾ ಸಮಿತಿ ವತಿಯಿಂದ 67ನೇ ವರ್ಷದ ಮಹಾಗಣೇಶೋತ್ಸದ ನಿಮಿತ್ತ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಣೇಶಮೂರ್ತಿ ಪ್ರತಿಷ್ಠಾಪನೆ ನಡೆಯಿತು.
ಮತ್ತೊಂದೆಡೆ, ಶ್ರೀ ರಾಘವೇಂದ್ರ ಸ್ವಾಮಿ ಮಠ ಕಲ್ಲಾರೆ ಇದರ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ವಿಜೃಂಭಣೆಯೊಂದಿಗೆ ನಡೆಯಿತು. ಪುತ್ತೂರು ದರ್ಬೆಯ ಕಾವೇರಿಕಟ್ಟೆ ಕಾರ್ ಟೆಕ್ ಬಳಿ ಇಂದು ಬೆಳಗ್ಗೆ ಅರ್ಚಕರಾದ ಉದಯ ಭಟ್ ಅವರು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆ, ಗಣಪತಿ ಹವನ, ಮಹಾಪೂಜೆ ನೆರವೇರಿಸಿದರು. ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.
ಈ ವೇಳೆ, ಸಮಿತಿಯ ಗೌರವ ಅಧ್ಯಕ್ಷರಾದ ಡಾ. ಗೋಪಿನಾಥ ಪೈ, ಅಧ್ಯಕ್ಷ ದಿನೇಶ್ ಪಿ, ಉಪಾಧ್ಯಕ್ಷ ದೀಪಕ್ ಶೆಟ್ಟಿ, ಕಾರ್ಯದರ್ಶಿ ಸೂರಜ್ ಶೆಟ್ಟಿ, ಕೋಶಾಧಿಕಾರಿ ದಿನೇಶ್ ಕುಮಾರ್ ಮರೀಲು, ಜತೆ ಉಪಾಧ್ಯಕ್ಷರಾದ ಸಂಪತ್ ಶೆಟ್ಟಿ, ಗಣೇಶ್ ರೈ, ಉಮಾಶಂಕರ್ ಪರ್ಲಡ್ಕ, ಜತೆ ಕಾರ್ಯದರ್ಶಿ ಗೋವರ್ಧನ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಚಾಮರಾಜನಗರದಲ್ಲಿ ರಾಮನ ಅವತಾರದ ಗಣಪತಿ ಪ್ರತಿಷ್ಠಾಪನೆ: ಮೊದಲ ಪೂಜೆ ಸಲ್ಲಿಸಿದ ಡಿಸಿ, ಎಸ್ಪಿ - special ganesha idol