ETV Bharat / state

ಅರಣ್ಯ ಅಪರಾಧಗಳ ನಿರ್ವಹಣೆಗಾಗಿ ಗರುಡಾಕ್ಷಿ ಆನ್​ಲೈನ್ ಎಫ್ಐಆರ್ ತಂತ್ರಾಂಶ ಅಭಿವೃದ್ಧಿ - GARUDAKSHI ONLINE FIR SYSTEM

ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಕಾನೂನು ಚೌಕಟ್ಟು ಬಲಪಡಿಸಲು ಆನ್‌ಲೈನ್ ಮೂಲಕವೇ ಎಫ್‌ಐಆರ್‌ ದಾಖಲಿಸಲು ಗರುಡಾಕ್ಷಿ ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ.

ಅರಣ್ಯ
ಅರಣ್ಯ (IANS)
author img

By ETV Bharat Karnataka Team

Published : Jan 6, 2025, 5:53 PM IST

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು ಗರುಡಾಕ್ಷಿ ಆನ್​​​ಲೈನ್ ಎಫ್​ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಾಳೆ (ಜ.7ರಂದು) ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ.

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲೂ ಸಹ ಪ್ರಥಮ ವರ್ತಮಾನ ವರದಿಯನ್ನು (ಎಫ್​ಐಆರ್​) ಗಳನ್ನು ಆನ್‌ಲೈನ್‌ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಸಚಿವ ಈಶ್ವರ್​ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ವೈಲ್ಡ್ ಲೈಫ್ ಟ್ರಸ್ಟ್ ಆಫ್​ ಇಂಡಿಯಾ (WTI) ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.

ಪ್ರಾಯೋಗಿಕವಾಗಿ 5 ವಿಭಾಗಗಳಲ್ಲಿ ಜಾರಿ : ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗತ್ತದೆ. ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಗರುಡಾಕ್ಷಿ ಆನ್​​ಲೈನ್ ಎಫ್ಐಆರ್ ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬಲಿದೆ.

ಇದನ್ನೂ ಓದಿ: ಅಪಾಯಕಾರಿ ವೈರಸ್ ಅಲ್ಲ, ಆದರೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.