ETV Bharat / state

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ - CM SIDDARAMAIAH

ಗೌತಮ್ ಅದಾನಿಯನ್ನು ರಕ್ಷಿಸುತ್ತಿರುವವರು ಯಾರೆಂದು ದೇಶಕ್ಕೆ ಗೊತ್ತಿದೆ. ತಕ್ಷಣವೇ ಅವರನ್ನು ಬಂಧಿಸಬೇಕು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

CM Siddaramaiah ಸಿಎಂ ಸಿದ್ದರಾಮಯ್ಯ
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 22, 2024, 2:02 PM IST

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂಬುದು ದೇಶಕ್ಕೆ ಗೊತ್ತಿದೆ. ತಕ್ಷಣ ಅದಾನಿಯನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಮೈಸೂರು ವಿಮಾನ‌ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಸಿಎಂ, ಗೌತಮ್ ಅದಾನಿಗೆ ರಕ್ಷಣೆ ಕೊಡುತ್ತಿರುವ ಸತ್ಯವನ್ನು ದೇಶದ ಜನರಿಗೆ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ರಾಜ್ಯದ ರೈತರಿಗೆ ಕೇಂದ್ರ ಮಾಡಿದ ಅನ್ಯಾಯ ಸರಿಯಾ?: ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ.58 ರಷ್ಟು ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ವರ್ಷದಿಂದ ವರ್ಷಕ್ಕೆ ನಬಾರ್ಡ್​ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ರೈತರಿಗೆ ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್​ಗಳ ಬಳಿ ಸಾಲಕ್ಕೆ ಶೇ.10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದರು.

ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ನಾಡಿದ್ದು ಸರಿ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿಯವರು ಏಕೆ ಮಾತನಾಡುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ಆಹಾರ ಭದ್ರತಾ ಕಾಯ್ದೆ ನಮ್ಮದು-ವಿರೋಧಿಸಿದ್ದು ಮುರುಳಿ ಮನೋಹರ ಜೋಶಿ: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಬಿಜೆಪಿ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ?. ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಸಿಎಂ ಲೇವಡಿ ಮಾಡಿದರು.

ಇದನ್ನೂ ಓದಿ: ಅದಾನಿ ವಿರುದ್ಧ ಅಮೆರಿಕದಲ್ಲಿ ಕೇಸ್​: ಮತ್ತೆ ದೊಡ್ಡ ಕುಸಿತ ಕಂಡ ಸೆನ್ಸೆಕ್ಸ್​, 23,349 ಅಂಕಗಳಿಗೆ ಇಳಿದ ನಿಫ್ಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.