ಬೆಂಗಳೂರು: 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಮತ್ತೊಮ್ಮೆ ಆದೇಶಿಸಿದೆ. ಸಾರ್ವತ್ರಿಕ ವರ್ಗಾವಣೆಗಳನ್ನು ಮೊದಲಿಗೆ ಜುಲೈ 9ರವರೆಗೆ ಕೈಗೊಳ್ಳಲು ಆಯಾ ಇಲಾಖೆಗಳ ಸಚಿವರಿಗೆ ಅಧಿಕಾರ ನೀಡಿ ಆದೇಶಿಸಲಾಗಿತ್ತು. ತದನಂತರ ಈ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿತ್ತು.
ಎಲ್ಲ ವೃಂದಗಳಿಗೆ (ಗ್ರೂಪ್ ಎ, ಬಿ, ಸಿ, ಡಿ) ಅನ್ವಯವಾಗುವಂತೆ, ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಅಧಿಕಾರವನ್ನು ಸಚಿವರಿಗೆ ನೀಡಲಾಗಿದೆ.
ಇದನ್ನೂ ಓದಿ: ನಿರೂಪಕಿ ಅಪರ್ಣಾ ನಿಧನದ ಬಳಿಕ ಹೊಸ ಧ್ವನಿಗಾಗಿ ನಮ್ಮ ಮೆಟ್ರೋ ಹುಡುಕಾಟ - Namma metro searching new voice