ETV Bharat / state

ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ, ಕುಕ್ಕೆ ಸುಬ್ರಹ್ಮಣ್ಯದಂತೆ ಅಭಿವೃದ್ಧಿಗೆ ಪಣ - GHATI SUMBRAMANYA TEMPLE

ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಂತೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರವೂ ನಾಗಾರಾಧನೆಯ ಸ್ಥಳವಾಗಿದೆ. ಇದರ ಅಭಿವೃದ್ಧಿಗೋಸ್ಕರ ಪ್ರಾಧಿಕಾರಕ್ಕೆ ಚಾಲನೆ ಸಿಕ್ಕಿದೆ.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ (ETV Bharat)
author img

By ETV Bharat Karnataka Team

Published : Jan 13, 2025, 10:14 AM IST

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ) : ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ಸರ್ಕಾರ ರಚನೆ ಮಾಡಿತ್ತು. ಪ್ರಾಧಿಕಾರಕ್ಕೆ ನೂತನವಾಗಿ 5 ಮಂದಿ ನಾಮನಿರ್ದೇಶಿತರನ್ನು ಆಯ್ಕೆ ಮಾಡುವ ಮೂಲಕ ಪ್ರಾಧಿಕಾರಕ್ಕೆ ಚಾಲನೆ ನೀಡಿದೆ.

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ, ನಾಗಾರಾಧನೆಯ ಕ್ಷೇತ್ರವಾಗಿದ್ದು, ಅತಿ ಹೆಚ್ಚು ಆದಾಯ ಬರುವ ದೇವಸ್ಥಾನಗಳಲ್ಲಿ ಗುರುತಿಸಿಕೊಂಡಿದೆ. ಈ ಕ್ಷೇತ್ರವನ್ನ ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಪ್ರಾಧಿಕಾರಕ್ಕೆ ನೂತನವಾಗಿ ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಆರ್.ವಿ. ಮಹೇಶ್ ಕುಮಾರ್, ಎಂ ಹೇಮಲತ ಅವರನ್ನು ನಾಮನಿರ್ದೇಶಿತರಾಗಿ ಆಯ್ಕೆ ಮಾಡಲಾಗಿದೆ. ನೂತನ ಸದಸ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅಭಿನಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ದುಡಿಯುವಂತೆ ಸಲಹೆ ನೀಡಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಧಿಕಾರದ ಸದಸ್ಯ ಆರ್.ವಿ. ಮಹೇಶ್ ಕುಮಾರ್, ಜಾತ್ರೆ ಸಮಯದಲ್ಲಿ ಭಕ್ತರು ಸಾರ್ವಜನಿಕರು ಕಿಲೋಮೀಟರ್ ದೂರ ಸರದಿ ಸಾಲಿನಲ್ಲಿ ಕಾಯುವುದನ್ನ ನಾವು ಗಮನಿಸಿದ್ದೇವೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಅಲ್ಲದೆ ರಸ್ತೆ ಅಗಲೀಕರಣ, ಉತ್ತಮ ಸುಸಜ್ಜಿತ ಶೌಚಾಲಯ ನಿರ್ಮಾಣ, ಭೋಜನಕೂಟ ಕಟ್ಟಡ ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಕ್ಷೇತ್ರವನ್ನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಅಭಿವೃದ್ಧಿ ಮಾಡುವುದಾಗಿ ಹೇಳಿದರು.

ಇದನ್ನೂ ಓದಿ: ಘಾಟಿ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ಬ್ರಹ್ಮರಥೋತ್ಸವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.