ಉಪ್ಪಿನಂಗಡಿ(ದಕ್ಷಿಣ ಕನ್ನಡ): ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.
ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು ಎಂಬಲ್ಲಿ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು.
ಭಾನುವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲೀಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್ ಮೊಬೈಲ್‌ನಲ್ಲಿ ಸಂಬಂಧಿಕಳೊಂದಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದಳು. ಇದಕ್ಕೆ ತಾಯಿ ಆಕ್ಷೇಪಿಸಿ, ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಾದ ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೆಲಸ ಸಿಗದೆ ಹತಾಶೆ: ಮೆಕ್ಯಾನಿಕಲ್ ಇಂಜಿನಿಯರ್ ಆತ್ಮಹತ್ಯೆಗೆ ಶರಣು - Mechanical Engineering Suicide