ETV Bharat / state

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟಿಸ್​ ನೀಡಿ ದಂಡ ವಿಧಿಸಿ: ಬಿಬಿಎಂಪಿ ಆಯುಕ್ತ ಸೂಚನೆ - BBMP - BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟಿಸ್​ ನೀಡಿ ದಂಡ ವಿಧಿಸಬೇಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (ETV Bharat)
author img

By ETV Bharat Karnataka Team

Published : Aug 5, 2024, 10:36 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟಿಸ್​ ನೀಡಿ ದಂಡ ವಿಧಿಸಬೇಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ನಂತರ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್​ ಜಾರಿಗೊಳಿಸಿ ಸ್ವಚ್ಛತೆ ಮಾಡಿ ದಂಡ ವಿಧಿಸುವುದರ ಜೊತೆಗೆ ಮತ್ತೆ ಈ ರೀತಿ ಮರುಕಳಿಸದಂತೆ ಎಚ್ಚರಿಕೆ ನೀಡಬೇಕು ಎಂದು ಸೂಚಿಸಿದರು.

ಖಾಲಿ ನಿವೇಶನ/ಪ್ರದೇಶಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶಿಲಿಸಿ, ಆಸ್ತಿ ತೆರಿಗೆ ವ್ಯಾಪ್ತಿಗೆ ಬರದಿದ್ದಲ್ಲಿ ಕೂಡಲೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಕಾನೂನು ಕ್ರಮ: ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆಯಾ ವಲಯ ವ್ಯಾಪ್ತಿಯಲ್ಲಿರುವ ಮುದ್ರಣಾಲಯಗಳಿಗೆ ನೋಟಿಸ್​ ನೀಡಿ ಯಾವುದೇ ಅನಧಿಕೃತ ಜಾಹೀರಾತು ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘನೆ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.

ವೈಟ್ ಟಾಪಿಂಗ್ ಕಾಮಗಾರಿ ಕೂಡಲೇ ಪ್ರಾರಂಭಿಸಿ: ಹೊಸದಾಗಿ ಕೈಗೆತ್ತಿಕೊಳ್ಳುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರಿ ಪೊಲೀಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಬೀದಿ ದೀಪಗಳ ನಿರ್ವಹಣೆ ಸರಿಯಾಗಿರಲಿ: ನಗರದಲ್ಲಿ ಬೀದಿ ದೀಪಗಳು ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯುತ್ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5 ರಿಂದ ರಾತ್ರಿ 8.30 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕಿದೆ. ಈ ಸಂಬಂಧ, ನಾಗರೀಕರು ‘ಸಹಾಯ’ದಲ್ಲಿ ನೀಡುವ ದೂರುಗಳನ್ನು ಕೂಡಲೇ ಸ್ಪಂದಿಸಿ ಬಗೆಹರಿಸಬೇಕು. ಬೀದಿ ದೀಪಗಳಿಲ್ಲದಿರುವ ಕಡೆ ಕೂಡಲೇ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.

ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ: ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ 160 ರಿಂದ 170 ಪ್ರಕರಣಗಳು ಕಂಡುಬರುತ್ತಿದೆ. ಡೆಂಘೀ ಕುರಿತು ಪರೀಕ್ಷಾ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. 600 ಫಾಗಿಂಗ್ ಯಂತ್ರ ಹಾಗೂ 618 ಸ್ಪ್ರೇಯರ್​ಗಳ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಆಯುಕ್ತರುಗಳಾದ ಮುನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರುಗಳಾದ ರಮೇಶ್, ಶಿವಾನಂದ್ ಕಪಾಶಿ, ಕರೀಗೌಡ, ರಮ್ಯಾ, ವಿನೋತ್ ಪ್ರಿಯಾ, ಪ್ರೀತಿ ಗೆಹ್ಲೋಟ್, ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಕಟ್ಟುನಿಟ್ಟಿನ ನಿಯಮಗಳು ಜಾರಿ - Strict Rules For Women PG

ETV Bharat Logo

Copyright © 2024 Ushodaya Enterprises Pvt. Ltd., All Rights Reserved.