ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿಯ ಎಸ್ಐಟಿ ತಂಡ, ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದೆ.
ಆರೋಪಿಯ ಹೈದರಾಬಾದ್ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ.ಚಿನ್ನದ ಬಿಸ್ಕೆಟ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಐಟಿಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ಆರೋಪಿ ಸತ್ಯನಾರಾಯಣ ವರ್ಮಾ, ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಮಾಹಿತಿಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದ ಚರ್ಚೆಗೆ ಆಗ್ರಹ: ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ, ಜೆಡಿಎಸ್ ನಿರ್ಧಾರ - Night Protest
ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ಎಸ್ಐಟಿಯಿಂದ ಮತ್ತೋರ್ವ ಆರೋಪಿ ಅರೆಸ್ಟ್ - Valmiki Corporation Scam