ETV Bharat / state

ಬೆಳಗಾವಿಯಲ್ಲಿ ಮಹಿಳೆ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ - GOLD CHAIN ROBBERY

ಬೆಳಗಾವಿ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಚಿನ್ನದ ಸರ ದೋಚಿರುವ ಘಟನೆ ನಡೆದಿದೆ.

POLICE
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು (ETV Bharat)
author img

By ETV Bharat Karnataka Team

Published : Jan 27, 2025, 7:11 PM IST

ಬೆಳಗಾವಿ : ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡುವ ಮೂಲಕ ಹಾಡಹಗಲೇ ದರೋಡೆಕೋರ ಅಟ್ಟಹಾಸ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.‌ ಚನ್ನಮ್ಮ ನಗರದ ಎಲ್&ಟಿ ಕಂಪನಿ ಉದ್ಯೋಗಿ ಮುರುಗನ್ ಅವರ ಮನೆಯಲ್ಲಿ‌ ಕಳ್ಳತನವಾಗಿದೆ.

ದರೋಡೆ ಬಗ್ಗೆ ಎಲ್&ಟಿ ಕಂಪನಿ ಉದ್ಯೋಗಿ ಮುರುಗನ್ ಮಾತನಾಡಿದರು (ETV Bharat)

ಮುರುಗನ್ ಕೆಲಸಕ್ಕೆ ತೆರಳಿದ ವೇಳೆ ಮನೆಗೆ ನುಗ್ಗಿದ ದರೋಡೆಕೋರ, ಅವರ ಪತ್ನಿಯ ಕಣ್ಣಿಗೆ ಖಾರದಪುಡಿ ಎರಚಿ ಕತ್ತು ಹಿಸುಕಿ ಕೊರಳಲ್ಲಿದ್ದ ಮಾಂಗಲ್ಯ, ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನ್ ಅರಸ, ಖಡೇಬಜಾರ್ ಎಸಿಪಿ ಶೇಖರಪ್ಪ, ಉದ್ಯಮಬಾಗ ಪೊಲೀಸ್ ಠಾಣೆಯ ಸಿಪಿಐ ಡಿ. ಕೆ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿಯಲ್ಲಿ‌ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡು, ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ತಾಲೂಕಿನ ಜಾಡಶಾಹಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.

ಬೆಳಗಾವಿಯಲ್ಲಿ‌ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು (ETV Bharat)

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ನಿವಾಸಿ ಅಕ್ಷಯ ಪಾಟೀಲ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಬೆಳಗಾವಿ ಕಡೆಯಿಂದ ದೇಸೂರಕ್ಕೆ ಹೋಗುವಾಗ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಅಕ್ಷಯ ಪಾಟೀಲ್, ಅವರ ಪತ್ನಿ ಮತ್ತು ಮಗು ಪ್ರಯಾಣಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ತಕ್ಷಣವೇ ಕಾರು ನಿಲ್ಲಿಸಿದ ಹಿನ್ನೆಲೆ ಅಕ್ಷಯ ಪಾಟೀಲ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಶಿವಮೊಗ್ಗ: ಎಟಿಎಂ ಕಳ್ಳತನಕ್ಕೆ ಯತ್ನ, ಸೈರನ್​​ನಿಂದ ಪರಾರಿಯಾದ ಆರೋಪಿ ಅರೆಸ್ಟ್​​​ - ATM THEFT ATTEMPT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.