ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕೇರಳದ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನ ನಿವಾಸಿಯನ್ನು ಬಂಧಿಸಲಾಗಿದೆ.
ಮೇ 5 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್IX 814 ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಈ ಪ್ರಯಾಣಿಕನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಡೆದಿದ್ದಾರೆ. ಬಳಿಕ ಆತನಿಂದ ಮೂರು ಅಂಡಾಕಾರದ ಒಟ್ಟು 644 ಗ್ರಾಂ ತೂಕದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಅಂಡಾಕಾರದ ವಸ್ತುಗಳನ್ನು ತೆಗೆದು ನೋಡಿದಾಗ ರೂ.40,40,220 ಮೌಲ್ಯದ 578 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓದಿ: ಭಾರೀ ಮಳೆಗೆ ಹೈದರಾಬಾದ್‌ನಲ್ಲಿ ಗೋಡೆ ಕುಸಿತ: 7 ಮಂದಿ ಸಾವು - Wall Collapse