ETV Bharat / state

ಗಂಗಾವತಿ: ಹಂಪಿ ಪ್ರವಾಸಕ್ಕೆ ಹೊರಟ ಶಾಲಾ ಮಕ್ಕಳಿದ್ದ ಸರ್ಕಾರಿ ಬಸ್​ ಪಲ್ಟಿ - BUS ACCIDENT

ಗಂಗಾವತಿಯ ಮರಳಿ ಸಮೀಪ ಶಾಲಾ ಮಕ್ಕಳನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಇಲಾಖೆ ಬಸ್​ ರಸ್ತೆ ಬದಿಯ ಹೊಲಕ್ಕೆ ಉರುಳಿದೆ.

GANGAVATHI BUS ACCIDENT
ಅಪಘಾತಕ್ಕೀಡಾದ ಸರಕಾರಿ ಬಸ್​ (ETV Bharat)
author img

By ETV Bharat Karnataka Team

Published : Nov 28, 2024, 10:40 AM IST

ಗಂಗಾವತಿ(ಕೊಪ್ಪಳ): ಹಂಪಿ ಪ್ರವಾಸಕ್ಕೆ ಹೊರಟಿದ್ದ ಕಲಬುರಗಿಯ ಗುರುಮಿಟ್ಕಲ್‌ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್‌ ಗಂಗಾವತಿಯ ಮರಳಿ ಸಮೀಪ ರಸ್ತೆ ಬದಿಯ ಹೊಲಕ್ಕೆ ಉರುಳಿದೆ. ಇಂದು ಬೆಳಗ್ಗೆ 4:30ರ ಸುಮಾರಿಗೆ ಘಟನೆ ನಡೆದಿದೆ. ಅದೃಷ್ಟವಶಾತ್, ಬಸ್‌ನಲ್ಲಿದ್ದ 60 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ ಸಣ್ಣ ಪ್ರಮಾಣದ ಗಾಯವಾಗಿದೆ.

ಸಾರಿಗೆ ಇಲಾಖೆಯ ಗಂಗಾವತಿ ಘಟಕದ ವ್ಯವಸ್ಥಾಪಕ ರಾಜಶೇಖರ್​​​​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳಿಗೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿದ್ದಾರೆ.

ಶಾಲಾ ಮಕ್ಕಳು ಬುಧವಾರ ರಾತ್ರಿ ಪ್ರವಾಸ ಹೊರಟಿದ್ದರು. ಬೆಳಗ್ಗೆ ಮರಳಿ ಸಮೀಪ ಪೇಪರ್ ಸಾಗಿಸುವ ವಾಹನ ರಸ್ತೆ ಮಧ್ಯೆ ಎದುರಾಗಿದೆ. ಚಾಲಕ ಸದಾಶಿವಯ್ಯ ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿಹಿ ಹಣ್ಣೆಂದು ವಿಷಪೂರಿತ ಕಾಯಿ ಸೇವಿಸಿ ಮಕ್ಕಳು ಸೇರಿ 12 ಮಂದಿ ಅಸ್ವಸ್ಥ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.