ETV Bharat / state

ದೀರ್ಘಾವಧಿಯಿಂದ ಒಂದೇ ಸ್ಥಳ, ಒಂದೇ ಹುದ್ದೆಯಲ್ಲಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡಿ: ಡಿಸಿಗಳಿಗೆ ಸರ್ಕಾರದ ಸೂಚನೆ - Revenue Department

ಕಂದಾಯ ಇಲಾಖೆಯಲ್ಲಿ ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು ಮತ್ತು ಇಂತಹವರ ಬಗ್ಗೆ ದೂರುಗಳ ಬಂದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಇಂತಹ ಅಧಿಕಾರಿಗಳ ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಧಾನಸೌಧ
ವಿಧಾನಸೌಧ (ETV Bharat)
author img

By ETV Bharat Karnataka Team

Published : Jul 14, 2024, 3:45 PM IST

ಬೆಂಗಳೂರು: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ. ಕೆಲ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿದೆ. ಈ ಹಿನ್ನೆಲೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರ ಬರೆದಿದ್ದಾರೆ.

ಜುಲೈ 8ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಬೇಕು. ಜಿಲ್ಲಾ ಮಟ್ಟದಲ್ಲಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿತ್ತು‌.

ಅಲ್ಲದೇ, ಕಚೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷತೆ ತೋರಿದ ಅಧಿಕಾರಿ, ಸಿಬ್ಬಂದಿ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸೂಚಿಸಿದ್ದರು.

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು, ಅಲ್ಲದೆ ಇಂತಹ ಹಲವು ಅಧಿಕಾರಿಗಳು, ನೌಕರರ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ, ಸ್ಥಾನದಲ್ಲಿ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಸೂಚಿಸಿದೆ. ಇದನ್ನು ಆದ್ಯತೆಯ ಮೇರೆಗೆ ಎಂದು ಪರಿಗಣಿಸುವಂತೆಯೂ ಪ್ರಧಾನ ಕಾರ್ಯದರ್ಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕಾನೂನು ಭಯವಿರಬೇಕಾದರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ನಿಯಂತ್ರಣ ಅಗತ್ಯ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.