ETV Bharat / state

ಸಹಕಾರ ಸಂಘಗಳ ನೇಮಕಾತಿ ಅಧಿಕಾರ ಮೊಟಕುಗೊಳಿಸಿದ್ದ ಆದೇಶ ರದ್ದತಿ ಪ್ರಶ್ನಿಸಿ ಮೇಲ್ಮನವಿ - KARNATAKA HIGH COURT

ಸಹಕಾರ ಸಂಘಗಳ ನೇಮಕಾತಿ ಅಧಿಕಾರ ಮೊಟಕುಗೊಳಿಸಿದ್ದ ಆದೇಶ ರದ್ದ ಮಾಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.

GOVERNMENT FILES APPEAL  SINGLE MEMBER BENCH ORDER  COOPERATIVE SOCIETIES CASE  BENGALURU
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Jan 18, 2025, 7:53 AM IST

ಬೆಂಗಳೂರು : ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಸಂವಿಧಾನ ಬಾಹಿರ ಎಂದು ಘೋಷಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ದ್ವಿಸದಸ್ಯ ಪೀಠ ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಆದರೆ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂಬ ಸರ್ಕಾರದ ಮನವಿ ಈ ಹಂತದಲ್ಲಿ ಪರಿಗಣಿಸಿಲ್ಲ. ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128-ಎ ಅಡಿ ಕರಡು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದ್ದು, ಅವುಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ನಿಗದಿಪಡಿಸಿತು.

ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128-ಎ ಇದರ ತಿದ್ದುಪಡಿ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ.ವಿ. ಪ್ರಸಾದ್ ಹಾಗೂ ಇತರರು ತರರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅನಂತ್ ರಮಾನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಕ್ಷನ್ 128-ಎ ಸಂವಿಧಾನ ಬಾಹಿರವೆಂದು 2024ರ ಆಗಸ್ಟ್​ 8ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಓದಿ: ಮಹಿಳೆಯ ಅಪಹರಣ ಆರೋಪ: ಹೆಚ್​.ಡಿ.ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.