ETV Bharat / state

ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 14,523 ಹುದ್ದೆಗಳು ಹಂತ ಹಂತವಾಗಿ ಭರ್ತಿ: ಹೈಕೋರ್ಟ್‌ಗೆ ಸರ್ಕಾರದ ಭರವಸೆ - Health Dept Recruitment - HEALTH DEPT RECRUITMENT

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಕೀಯ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುವುದಾಗಿ ಸರ್ಕಾರ ತಿಳಿಸಿದೆ.

ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ (ETV Bharat)
author img

By ETV Bharat Karnataka Team

Published : Aug 3, 2024, 6:45 AM IST

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ - ಹಂತವಾಗಿ ಭರ್ತಿ ಮಾಡುತ್ತಿರುವುದಾಗಿ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ, ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರ ಲಿಖಿತ ಹೇಳಿಕೆಯನ್ನು ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಬರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದರು.

ಅಲ್ಲದೇ ಇಲಾಖೆಯಲ್ಲಿ ವಿವಿಧ ಹಂತದ ಒಟ್ಟು 34,967 ಹುದ್ದೆಗಳು ಮಂಜೂರಾಗಿದ್ದು, ಅವುಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತ - ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಸರ್ಕಾರ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ವಿವರಿಸಿದೆ. ಈ ಅಂಶ ದಾಖಲಿಸಿಕೊಂಡಿದ್ದ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿತು.

ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ ಅಧಿಕಾರಿಗಳು, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರು ಸೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಸಂಖ್ಯೆ 34,967 ಇದ್ದು, ಇದರಲ್ಲಿ 20,444 ಹುದ್ದೆಗಳು ಭರ್ತಿಯಾಗಿವೆ. 14,523 ಹುದ್ದೆಗಳು ಖಾಲಿ ಇವೆ. ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 16,501 ಹುದ್ದೆಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಕಡ್ಡಾಯ ಸೇವೆಯಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಜೂನಿಯರ್ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡಿತಿದೆ. 413 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. 498 ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ, ಖಾಲಿ ಇರುವ 10,253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.75ರಷ್ಟು ಹುದ್ದೆಗಳ ಭರ್ತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.

ಈ ವೇಳೆ ಪ್ರಕರಣದಲ್ಲಿ ಅಮಿಕಸ್​ ಕ್ಯೂರಿಯಾ(ಹೈಕೋರ್ಟ್‌ಗೆ ನೆರವುಗಾರ ವಕೀಲ) ಶ್ರೀಧರ ಪ್ರಭು ವಾದ ಮಂಡಿಸಿ, ಸರ್ಕಾರದ ಹೇಳಿಕೆಯಲ್ಲಿ ನ್ಯಾಯಾಲಯ ಗಂಭೀರವಾಗಿ ಗಮನಿಸಬೇಕಾದ ಹಲವು ಅಂಶಗಳಿಗೆ 2,371 ವೈದ್ಯರು ಗ್ರಾಮೀಣ ಕಡ್ಡಾಯ ಸೇವೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ, ಗ್ರಾಮೀಣ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಿ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದು ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವೈದ್ಯಕೀಯ ಸೇವೆ ಮೇಲೆ ಪರಿಣಾಮ ಬೀರಲಿದೆ. ಮುಖ್ಯವಾಗಿ ಒಟ್ಟು 16 ಸಾವಿರ ಡಿ ಗ್ರೂಪ್ ಹುದ್ದೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಹಳ್ಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿ ಗ್ರೂಪ್ ನೌಕರರ ಸೇವೆ ಬಹಳ ಮುಖ್ಯ. ಅಲ್ಲದೇ, ಗ್ರಾಮೀಣ ಭಾಗದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ವೈದ್ಯರು, ತಜ್ಞ ವೈದ್ಯರು, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇದ್ದು, ಈ ಅಂಶಗಳನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಯನಾಡ್‌ ಭೀಕರ ಭೂಕುಸಿತ: 3 ದಿನದ ಬಳಿಕ ಸಾವು ಗೆದ್ದು ಬಂದ ಒಂದೇ ಕುಟುಂಬದ ನಾಲ್ವರು! - Wayanad Rescue Operation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.