ETV Bharat / state

ಗ್ರಾ.ಪಂ ಕಾರ್ಯದರ್ಶಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ - Gram Panchayat Secretaries - GRAM PANCHAYAT SECRETARIES

ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Vidhanasouda
ವಿಧಾನಸೌಧ (ETV Bharat)
author img

By ETV Bharat Karnataka Team

Published : Jun 24, 2024, 10:43 PM IST

ಬೆಂಗಳೂರು: ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್‌ರಚಿತ ನಾಗರಿಕ ನೋಂದಣಿ ಪದ್ಧತಿಯನ್ನು 01-01-2000ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಉಲ್ಲೇಖಿತ (1)ರ ಅಧಿಸೂಚನೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5)ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ ಮೂವತ್ತು ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಈ ಆದೇಶದನ್ವಯ ಜನನ, ಮರಣ ನೋಂದಣಿಗೆ ಸಂಬಂಧಿಸಿದಂತೆ, ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿಗಳ ಪಾತ್ರ, ಜವಾಬ್ದಾರಿ ಹಾಗೂ ನಿರ್ವಹಿಸಬೇಕಾದ ಕಾರ್ಯಗಳ ಕುರಿತ ಮಾರ್ಗಸೂಚಿಯನ್ನು ಒಳಗೊಂಡ ಪ್ರಮಾಣಿತ ಕಾರ್ಯಚರಣೆಯ ವಿಧಾನಗಳನ್ನು ಹೊರಡಿಸಲಾಗಿದೆ.

ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಮಾಡುವ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ crbdkar@gmail.com / ejanmahelpdesk@gmail.com ಮತ್ತು ದೂರವಾಣಿ 1800-425-6578ಕ್ಕೆ ಸಂಪರ್ಕಿಸಬೇಕು.

ಜನನ, ಮರಣ ನೋಂದಣಿ ಸಂಬಂಧ ಭಾರತದ ಮಹಾ ನೋಂದಣಾಧಿಕಾರಿಗಳು/ ರಾಜ್ಯದ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆ / ಆದೇಶ / ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ಗ್ರಾ.ಪಂ ಕಾರ್ಯದರ್ಶಿಗಳನ್ನು ನೇಮಿಸಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.