ETV Bharat / state

ಪಶ್ಚಿಮ ಘಟ್ಟದ ನದಿಗಳ ನೀರಿಗೆ ಹಸಿರು ಸೆಸ್: ಸಚಿವ ಈಶ್ವರ್ ಖಂಡ್ರೆ - GREEN CESS

ಪಶ್ಚಿಮಘಟ್ಟದ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಕುರಿತು ಪ್ರಸ್ತಾವನೆ ಸಲ್ಲಿಕೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

khandre
ಈಶ್ವರ್ ಖಂಡ್ರೆ (ETV Bharat)
author img

By ETV Bharat Karnataka Team

Published : Nov 13, 2024, 10:52 PM IST

ಬೆಂಗಳೂರು: ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟವು ಹಲವು ನದಿಗಳ ಮೂಲವಾಗಿದೆ. ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯ ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ, ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮ ಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್​ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಿದರೆ, ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು ಎಂದು ಹೇಳಿದ್ದಾರೆ.

ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ - ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: 2024-25 ಸಾಲಿನಲ್ಲಿ ಅಕ್ಟೋಬರ್​ವರೆಗೆ ಪಂಚ ಗ್ಯಾರಂಟಿಗಳಿಗೆ ಬಿಡುಗಡೆಯಾದ ಹಣವೆಷ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.