ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಆದರೆ, ರಷ್ಯಾದಲ್ಲಿ 67 ನಮ್ಮ ದೇಶದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡಿದ್ದಾರೆ. ಅದರಲ್ಲಿ 8 ಮಂದಿ ಯುವಕರು ತೀರಿ ಹೋಗಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಡ್ತಾರಾ? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನೆ ಮಾಡಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳ ಮೇಲೆ ಯಾವುದೇ ಎಫ್ಐಆರ್ ಇಲ್ಲ, ಚಾರ್ಜ್ಶೀಟ್ ಇಲ್ಲ. ಕೇವಲ ಸರ್ಕಾರ ಬೀಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡ್ಯಾಮೇಜ್ ಮಾಡಬೇಕು ಅಷ್ಟೇ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಕೆಲವು ಬಿಜೆಪಿ ನಾಯಕರು ಸಿಎಂ ಪರವಾಗಿದ್ದಾರೆ. ಪ್ರಾಸಿಕ್ಯೂಶನ್ ಕೊಟ್ಟಿದ್ದಾರಲ್ಲಾ ಕೊಡಲಿ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಕಿಡಿಕಾರಿದರು.