ETV Bharat / state

ಬಿಜೆಪಿಯವರ ಮಾತು ಕೇಳಿ ರಾಜ್ಯಪಾಲರು ಬಿಲ್​ಗಳನ್ನು ವಾಪಾಸ್ ಕಳುಹಿಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್ - DCM DK Shivakumar Statement

author img

By ETV Bharat Karnataka Team

Published : Aug 23, 2024, 1:18 PM IST

ಬಿಜೆಪಿಯವರ ಮಾತು ಕೇಳಿ ರಾಜ್ಯಪಾಲರು ಬಿಲ್​ಗಳನ್ನು ವಾಪಾಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದರು.

GOVERNOR SENT BACK 15 BILLS  DCM DK SHIVAKUMAR ALLEGATION  BENGALURU
ಡಿಸಿಎಂ ಡಿಕೆ ಶಿವಕುಮಾರ್ (ETV Bharat)
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ (ETV Bharat)

ಬೆಂಗಳೂರು: ಬಿಜೆಪಿ ಶಾಸಕರ ಮಾತುಕೇಳಿ ಬಿಲ್​ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ, ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಉತ್ತರಿಸಿದರು.

ಜಿಂದಾಲ್​ಗೆ ಭೂಮಿ ಮಾರಾಟ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದರು.

ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ, ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ?. ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು, ಎಲ್ಲರೂ ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.

ಓದಿ: ಮಸೂದೆ ವಾಪಸು ಕಳಿಸಿರುವುದರಿಂದ ರಾಜ್ಯಪಾಲರು ಸರ್ಕಾರದ ವಿರುದ್ಧ ಇದ್ದಾರೆ ಎಂಬುದು ಸ್ಪಷ್ಟ: ಸಚಿವ ಜಿ.ಪರಮೇಶ್ವರ್ - Parameshwar Statement

ETV Bharat Logo

Copyright © 2024 Ushodaya Enterprises Pvt. Ltd., All Rights Reserved.