ETV Bharat / state

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಚಿವ ಜಮೀರ್ ಹೇಳಿಕೆ: ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಂದ ಎಜಿಗೆ ಸೂಚನೆ - ZAMEER AHMED KHAN

ಮುಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ ನೀಡಿದ್ದ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಅಡ್ವೊಕೇಟ್ ಜನರಲ್​ಗೆ ಸೂಚಿಸಿದ್ದಾರೆ.

zameer ahmed khan
ಸಚಿವ ಜಮೀರ್ ಅಹಮದ್ ಖಾನ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ETV Bharat)
author img

By ETV Bharat Karnataka Team

Published : Nov 10, 2024, 6:25 PM IST

ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್​ಗೆ ಸೂಚನೆ ನೀಡಿದ್ದಾರೆ.

ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಟಿ.ಜೆ. ಅಬ್ರಹಾಂ: ವಸತಿ ಸಚಿವ ಬಿ.ಜೆಡ್. ಜಮೀರ್‌ ಅಹಮದ್ ಖಾನ್‌ ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪಿನ ವಿರುದ್ಧ ಹೇಳಿಕೆ ನೀಡಿದ್ದಾರೆ, ಅವರ ಮೇಲೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಹಾಂ ರಾಜ್ಯಪಾಲರಿಗೆ ಅ.21ಕ್ಕೆ ಮನವಿ ಸಲ್ಲಿಸಿದ್ದರು. ತಾವು ಸಲ್ಲಿಸಿರುವ ದೂರಿನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಡ್ವೊಕೇಟ್‌ ಜನರಲ್‌ ಅವರಿಗೆ ನಿರ್ದೇಶನ ನೀಡುವಂತೆ ಟಿ.ಜೆ. ಅಬ್ರಹಾಂ ರಾಜ್ಯಪಾಲರಿಗೆ ಮನವಿ ಮಾಡಿದ್ದರು.

ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆ: ಈ ಸಂಬಂಧ ಇದೀಗ ರಾಜ್ಯಪಾಲರು ಎಜಿಗೆ ಪತ್ರ ಬರೆದು ನಿಯಮದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪತ್ರದಲ್ಲಿ ಸಚಿವ ಜಮೀರ್ ಖಾನ್ ಹೈಕೋರ್ಟ್ ತೀರ್ಪಿನ ವಿರುದ್ಧ ಗಂಭೀರ ಆರೋಪ ಮಾಡಿ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸಿದ್ದಾರೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದೂರು ನೀಡಿದ್ದಾರೆ. ಈ ಸಂಬಂಧ ನಿಯಮದ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವಂತೆ ರಾಜ್ಯಪಾಲರಿಂದ ನಿರ್ದೇಶಿತನಾಗಿದ್ದೇನೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ತಿಳಿಸಿದ್ದಾರೆ.

ಟಿ.ಜೆ. ಅಬ್ರಹಾಂ ಮನವಿ ಏನು?: ಮುಡಾ ಪರ್ಯಾಯ ನಿವೇಶನ ಹಂಚಿಕೆ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಿದ ಹೈಕೋರ್ಟ್ ತೀರ್ಪನ್ನು ಸಚಿವ ಜಮೀರ್ ಅಹಮದ್​​ ಖಾನ್, ಇದು ರಾಜಕೀಯ ತೀರ್ಪು ಎಂದಿದ್ದರು. ನ್ಯಾಯಾಲಯದ ಘನತೆಗೆ ಕುಂದು ಉಂಟು ಮಾಡುವ ರೀತಿಯಲ್ಲಿ ಹಾಗೂ ತೀರ್ಪನ್ನು ರಾಜಕೀಯ ಚಟುವಟಿಕೆಗೆ ಹೋಲಿಸಿರುವ ಜಮೀರ್‌ ಅಹಮದ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿ ಟಿ.ಜೆ.ಅಬ್ರಹಾಂ ಅವರು ಸೆಪ್ಟೆಂಬರ್‌ 26ರಂದು ಅಡ್ವೊಕೇಟ್‌ ಜನರಲ್ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್​

ಬಳಿಕ ಟಿ. ಜೆ. ಅಬ್ರಾಹಂ ರಾಜ್ಯಪಾಲರನ್ನು ಅ.21ಕ್ಕೆ ಭೇಟಿಯಾಗಿ, ನಾನು ಸೆ.26ರಂದು ಅರ್ಜಿ ಸಲ್ಲಿಸಿದ್ದರೂ ಅಡ್ವೊಕೇಟ್‌ ಜನರಲ್‌ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನ್ಯಾಯಾಂಗ ನಿಂದನೆ ಕೃತ್ಯದಲ್ಲಿ ಭಾಗಿಯಾಗಿರುವ ಜಮೀರ್ ಅಹಮದ್ ಅವರಿಗೆ ರಕ್ಷಣೆ ಒದಗಿಸುವ ದುರುದ್ದೇಶದಿಂದ ನನ್ನ ಅರ್ಜಿಯನ್ನು ಬಾಕಿ ಇರಿಸಿಕೊಂಡಿದ್ದಾರೆ. ತ್ವರಿತವಾಗಿ ಅರ್ಜಿಯನ್ನು ವಿಲೇವಾರಿ ಮಾಡಿ, ಸಚಿವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವಂತೆ ಅಡ್ವೊಕೇಟ್‌ ಜನರಲ್‌ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದ ಸಂಪೂರ್ಣ ತನಿಖೆ ಆಗಿಲ್ಲ: ಸಚಿವ ಜಿ ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.