ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಎಸ್ಸಿ/ಎಸ್ಟಿ ಸಮುದಾಯದವರಿಗೆ ಶೇ.24ರಷ್ಟು ಮೀಸಲಾತಿ ಸಿಗಲಿದೆ.
'ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡಾವಳಿಯಲ್ಲಿ ಕ್ರಮ ವಹಿಸಲು ನಿರ್ದೇಶನವಿರುತ್ತದೆ.

2022ರ ಅಕ್ಟೋಬರ್ 23ರಲ್ಲಿ ಆದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇ. 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ಅಭಿಪ್ರಾಯ ನೀಡಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7 ಸೇರಿ ಒಟ್ಟು ಶೇ.24 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.
ಇದನ್ನೂ ಓದಿ: ಉಡುಪಿಯಲ್ಲಿದೆ ಉದ್ಯೋಗಾವಕಾಶ: ಎಂಎಸ್ಡಬ್ಲ್ಯೂ ಪದವೀಧರರಿಗೆ ಸುವರ್ಣಾವಕಾಶ..ಅರ್ಹರು ಅಪ್ಲೈ ಮಾಡಿ!