ಬೆಂಗಳೂರು : ಜನವರಿ 26 ರ ಗಣರಾಜ್ಯೋತ್ಸವ, ಆಗಸ್ಟ್-15 ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್- 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
![Govt issued circular to keep Dr BR Ambedkar's portrait in govt office](https://etvbharatimages.akamaized.net/etvbharat/prod-images/08-07-2024/kn-bng-04-government-circular-copy-7208083_08072024184219_0807f_1720444339_1052.jpg)
ಸುತ್ತೋಲೆಯಲ್ಲಿ ಸೂಚಿಸಿರುವಂತೆ ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ, ಆಗಸ್ಟ್-15 ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.
ನವೆಂಬರ್-26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ : ಅಂಬೇಡ್ಕರ್ ಚಿಂತನೆ, ನೀತಿಯಿಂದ ಭಾರತದ ಆರ್ಥಿಕತೆ ಬಲಿಷ್ಠ: ರಾಜ್ಯಪಾಲ ಗೆಹ್ಲೋಟ್ - Thawar Chand Gehlot