ETV Bharat / state

ಬೆಂಗಳೂರು ಟರ್ಫ್ ಕ್ಲಬ್​​ನಲ್ಲಿ ಕುದುರೆ ರೇಸ್​ ಆಯೋಜನೆಗೆ ಸರ್ಕಾರ ಆಕ್ಷೇಪ: ವಿಚಾರಣೆ ಮುಂದೂಡಿದ ಹೈಕೋರ್ಟ್ - Bengaluru Turf Club - BENGALURU TURF CLUB

ರೇಸ್​ ಕೋರ್ಸ್​​ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ನೀಡಿರುವ ಮಧ್ಯಂತರ ಅನುಮತಿಯನ್ನು ಸರ್ಕಾರ ಪ್ರಶ್ನಿಸಿದೆ. ಈ ಕುರಿತ ಅರ್ಜಿಯ ವಿಚಾರಣೆ ಶನಿವಾರಕ್ಕೆ ಮುಂದೂಡಲಾಗಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jun 21, 2024, 9:32 PM IST

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್ (ರೇಸ್ ಕೋರ್ಸ್)ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶನಿವಾರಕ್ಕೆ ಮುಂದೂಡಿದೆ.

ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್​ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್​ ಜನರಲ್​ ಶಶಿಕಿರಣ್​ ಶೆಟ್ಟಿ, ರೇಸ್ ಕೋರ್ಸ್​​ನಲ್ಲಿ ಕುದುರೆ ಪಂದ್ಯಗಳ ನಡೆಸುವ ವೇಳೆ ಬುಕ್ಕಿಗಳು ದೊಡ್ಡ ಮಟ್ಟದ ಅವ್ಯವಹಾರ ನಡೆಸಿದ್ದಾರೆ. ಈ ಸಂಬಂಧ ಸಿಸಿಬಿ ನಡೆಸಿದ ದಾಳಿಯಲ್ಲಿ ಹಣ ಬೆಟ್ ಮಾಡುವವರಿಗೆ ಪೆನ್ಸಿಲ್​​ನಿಂದ ಬರೆದ ಟಿಕೆಟ್​ ನೀಡುತ್ತಿದ್ದ ಕೋಟ್ಯಂತರ ರೂ.ಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆ ವಂಚನೆ ಮಾಡಲಾಗಿದೆ. ಅಲ್ಲದೆ, ಆಟೋ ಚಾಲಕರು ಸೇರಿದಂತೆ ಬಡ ಜನತೆ ತಾವು ದಿನಪೂರ್ತಿ ದುಡಿದ ಹಣವನ್ನು ಕುದರೆ ಪಂದ್ಯಗಳಿಗೆ ವಿನಿಯೋಗಿಸುತ್ತಿದ್ದು, ಜೀವನ ನಡೆಸುವುದು ಕಷ್ಟಕರವಾಗುತ್ತಿದೆ. ಈ ನಿಟ್ಟಿನಲ್ಲಿ ಕುದರೆ ಪಂದ್ಯಗಳಿಗೆ ಅನುಮತಿ ನೀಡಬಾರದು ಎಂದು ಕೋರಿದರು.

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನರ್ಸ್​ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘದ ಪರ ವಕೀಲರು, ಕುದುರೆ ಪಂದ್ಯ ಒಂದು ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಜಾಕಿಗಳು ಈಗಾಗಲೇ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಏಕ ಸದಸ್ಯ ಪೀಠ ಪಂದ್ಯಗಳ ಆಯೋಜನೆಗೆ ಅವಕಾಶ ನೀಡಿದೆ. ಇದೀಗ ಸರ್ಕಾರ ಪಂದ್ಯಗಳ ಆಯೋಜನೆಗೆ ಅವಕಾಶ ನೀಡದಂತೆ ಕೋರಿದರೆ ಅದನ್ನೇ ನಂಬಿ ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ವಿವಾದಿತ ಹೇಳಿಕೆ: ಆಯೋಜಕರ ವಿರುದ್ಧದ ಪ್ರಕರಣಕ್ಕೆ ತಡೆ - Udhayanidhi Stalin

ಅಲ್ಲದೆ, ರೇಸ್​ ಕೋರ್ಸ್​ನಲ್ಲಿ ಬೆಟ್ಟಿಂಗ್​ ಕಾನೂನು ಬದ್ಧವಾಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂ ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಬೆಟ್ಟಿಂಗ್​ನಿಂದ ಬಡ ಜನತೆಗೆ ತೊಂದರೆಯಾಗಲಿದೆ ಎನ್ನುವುದಾದರೆ ಸರ್ಕಾರ ಬೆಟ್ಟಿಂಗ್​ ನಡೆಸುವುದನ್ನು ಕಾನೂನುಬಾಹಿರ ಎಂಬುದಾಗಿ ಘೋಷಣೆ ಮಾಡಲಿ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅಲ್ಲದೆ, ಏಕ ಸದಸ್ಯ ಪೀಠ ಪಂದ್ಯಗಳ ಆಯೋಜನೆಗೆ ಅವಕಾಶ ನೀಡುವಂತೆ ಸೂಚನೆ ನೀಡಿದೆ. ಇದರಿಂದಾಗಿ ಶನಿವಾರ(ನಾಳೆ)ದಿಂದ ಪಂದ್ಯಗಳ ಆಯೋಜನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೊನೆಯ ಘಳಿಗೆಯಲ್ಲಿ ಪಂದ್ಯಕ್ಕೆ ತಡೆ ನೀಡಿದರೆ ತೀವ್ರ ತೊಂದರೆಯಾಗಲಿದೆ. ಆದ್ದರಿಂದ ಪಂದ್ಯಗಳ ಆಯೋಜನೆಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: ಬಿಟಿಸಿ ಆವರಣದಲ್ಲಿ ಅಕ್ರಮ ಬೆಟ್ಟಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಜತೆಗೆ ಬಿಟಿಸಿ ಪರವಾನಗಿ ಷರತ್ತುಗಳ ಉಲ್ಲಂಘನೆ ಮಾಡಿರುವುದಲ್ಲದೆ ಹಲವು ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ಸಕ್ಷಮ ಪ್ರಾಧಿಕಾರ ಬಿಟಿಸಿ ಅರ್ಜಿಯನ್ನು ತಿರಸ್ಕರಿಸಿದೆ. ಸಕ್ಷಮ ಪ್ರಾಧಿಕಾರ ಕ್ಲಬ್ ಹಾಗೂ ಬುಕ್ಕಿಗಳ ಅಕ್ರಮಗಳ ಬಗ್ಗೆ ಸಿಸಿಬಿ ತನಿಖೆ ಬಾಕಿ ಇದೆ ಎಂದೂ ಸಹ ಹೇಳಿದೆ. ಆದರೆ ಸಕ್ಷಮ ಪ್ರಾಧಿಕಾರ ಅರ್ಜಿ ತಿರಸ್ಕಾರಕ್ಕೆ ನೀಡಿರುವ ಕಾರಣಗಳು ಸರಿಯಲ್ಲ, ಅದಕ್ಕೂ ರೇಸ್​ಗೂ ಸಂಬಂಧವಿಲ್ಲ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕುದುರೆ ರೇಸ್ ನಡೆಸಲು ಅನುಮತಿ ನೀಡುವಂತೆ ಅರ್ಜಿದಾರರು ನ್ಯಾಯಾಲಯಕ್ಕೆ ಅರ್ಜಿಯಲ್ಲಿ ಕೋರಿದ್ದರು. ಅಲ್ಲದೆ, ಕುದುರೆ ಪಂದ್ಯಗಳ ಆಯೋಜನೆಗೆ ಅವಕಾಶ ನೀಡದಿದ್ದಲ್ಲಿ ಲಕ್ಷಾಂತರ ಮಂದಿಯ ಜೀವನೋಪಾಯಕ್ಕೆ ತೊಂದರೆ ಆಗಿದೆ. ಹೀಗಾಗಿ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ: ನಡ್ಡಾ, ಅಮಿತ್ ಮಾಳವಿಯಾಗೆ ಹೈಕೋರ್ಟ್‌ ರಿಲೀಫ್‌ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.