ETV Bharat / state

ಅಲ್ಪಸಂಖ್ಯಾತ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ಬಿಡುಗಡೆ

ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 284 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Central Govt  Zameer Ahmed Khan  Union Minister Smriti Irani minority department
ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ರೂ. ಬಿಡುಗಡೆ
author img

By ETV Bharat Karnataka Team

Published : Mar 13, 2024, 9:10 AM IST

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ.

ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇತ್ತೀಚೆಗೆ ದೆಹಲಿಗೆ ತೆರಳಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದ ಪ್ರಸ್ತಾವನೆ ಸಂಬಂಧ 284 ಕೋಟಿ ರೂ. ಯೋಜನೆಗೆ ಒಪ್ಪಿಗೆ ನೀಡಲಾಗಿದೆ.

ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಶೇಕಡಾ 60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇಕಡಾ 40 ರಷ್ಟು ಮೊತ್ತ ಭರಿಸಲಿದೆ. ಕೇಂದ್ರ ಸರ್ಕಾರದ ಈ ಮೊತ್ತದಲ್ಲಿ ರಾಜ್ಯದಲ್ಲಿ 27 ಯೋಜನೆಗಳು ಅನುಷ್ಠಾನಗೊಳ್ಳಲಿದ್ದು, ಶಾಲೆ- ಕಾಲೇಜು ಕಟ್ಟಡ, ಕೊಠಡಿ ಹಾಗೂ ಗ್ರಂಥಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಲು ನೆರವಾಗಲಿದೆ.

ಇದನ್ನೂ ಓದಿ: ಕಾಂಗ್ರೆಸ್​ನ 43 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಕಮಲ್​​ ನಾಥ್, ಅಶೋಕ್ ಗೆಹ್ಲೋಟ್ ಪುತ್ರರು ಕಣಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.