ETV Bharat / state

ಗೃಹಲಕ್ಷ್ಮಿ ಯೋಜನೆ ಯಶಸ್ವಿ, ಪ್ರತಿ ತಿಂಗಳು 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ:ಸಚಿವೆ ಹೆಬ್ಬಾಳ್ಕರ್ - ವಿಧಾನಸಭೆ

ಬಜೆಟ್ ಮೇಲಿನ ಚರ್ಚೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿ ಅವರು ಕೇಳಿದ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.

Minister Lakshmi Hebbalkar informed the Assembly
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.
author img

By ETV Bharat Karnataka Team

Published : Feb 22, 2024, 11:04 PM IST

ಗೃಹಲಕ್ಷ್ಮಿ ಯೋಜನೆ ಯಶಸ್ವಿ, ಪ್ರತಿ ತಿಂಗಳು 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ:ಸಚಿವೆ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ತಿಳಿಸಿದರು.

ಬಜೆಟ್ ಮೇಲಿನ ಚರ್ಚೆ ವೇಳೆ ಇಂದು ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು, ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿ ಆಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.

ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವು ಅಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.

ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.

ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಮನವಿ ಮಾಡಿದರು.

ಗ್ಯಾರೆಂಟಿ ಯೋಜನೆ: ಶಾಸಕ ಸಿದ್ದು ಸವದಿ ಮಾತು ಮುಂದುವರೆಸಿ, ಗ್ಯಾರೆಂಟಿ ಯೋಜನೆಗಳು ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಬರಗಾಲದ ಇಂತಹ ಸಂದರ್ಭದಲ್ಲಿ ರೈತರ ಬಗ್ಗೆ ಕಾಳಜಿ ಇದ್ದರೆ ಸಾಲಮನ್ನಾ ಮಾಡಿ ಎಂದು ಒತ್ತಾಯಿಸಿದರು.
ನೇಕಾರರನ್ನು ಕಡೆಗಣಿಸಲಾಗಿದೆ ನೇಕಾರರಿಗೆ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕರ ಕ್ಷೇತ್ರಕ್ಕೂ ಅನುದಾನ ಕೊಟ್ಟಿಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ಕೊಡಲಾಗಿದೆ, ಬಿಜೆಪಿ ಶಾಸಕರಿಗೆ ಕನಿಷ್ಠ 20 ಕೋಟಿ ರೂ. ಆದರೂ ಅನುದಾನ ಕೊಡುವಂತೆ ಮನವಿ ಮಾಡಿದರು.

ಇದನ್ನೂ ಓದಿ:ಸ್ಲಂಗಳ ಬಳಿ ತೆರೆದಿರುವ ಎಂಎಸ್‍ಐಎಲ್ ಮದ್ಯದ ಮಳಿಗೆಗಳಿಂದ ಪ.ಜಾ/ಪ.ಪಂ ಜನರು ಮತ್ತಷ್ಟು ದುಸ್ಥಿತಿಗೆ: ಸಮಿತಿ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.