ETV Bharat / state

ಅ.7ರಂದು ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ: ಲಕ್ಷ್ಮೀ ಹೆಬ್ಬಾಳ್ಕರ್ - Gruha Lakshmi Scheme

ಇದೇ 7, 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು ಎಂದು ಭರವಸೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ಭರ್ಜರಿಯಾಗಿ ಹೋಳಿಗೆ ಊಟ ಮಾಡಿ, ದಸರಾ ಹಬ್ಬ ಆಚರಿಸಿರಿ ಎಂದಿದ್ದಾರೆ.

author img

By ETV Bharat Karnataka Team

Published : 3 hours ago

Gruha Lakshmi Scheme Money Transfer From Oct 7:  Minister Lakshmi Hebbalkar
ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು (ETV Bharat)

ಬೆಳಗಾವಿ: ದಸರಾ ಹಬ್ಬದ ಸಂಭ್ರಮದಲ್ಲಿರುವ ನಾಡಿನ ಮಹಿಳೆಯರಿಗೆ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ಕೊಟ್ಟಿದ್ದಾರೆ.

ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ಮೊದಲ ದಿನದ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಇದೇ 7 ಮತ್ತು 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣ ಹಾಕಲಾಗುವುದು ಎಂದು ಭರವಸೆ ನೀಡಿದರು.

Gruha Lakshmi Scheme Money Transfer From Oct 7:  Minister Lakshmi Hebbalkar
ನವರಾತ್ರಿ ಉತ್ಸವಕ್ಕೆ ಚಾಲನೆ (ETV Bharat)

ಈ ಲಕ್ಷ್ಮೀ ಹೆಬ್ಬಾಳ್ಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಈ ಹೆಣ್ಣು ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಶ್ಲಾಘಿಸಿದ್ದಾರೆ. ಹೀಗಾಗಿ ಯೋಜನೆಯ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಹೇಳಿದರು.

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲ ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ, ದಸರಾ ಹಬ್ಬ ಆಚರಿಸಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಹೇಳುತ್ತಿದ್ದಂತೆ ಸಭೆಯಲ್ಲಿ ಸೇರಿದ್ದ ಮಹಿಳೆಯರಿಂದ ಕರತಾಡನ ಕೇಳಿಬಂತು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ನಿತ್ಯ ಸತ್ಯ, ನಿರಂತರ; ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ: ಸಚಿವೆ ಹೆಬ್ಬಾಳ್ಕರ್​​ - Gruha Lakshmi Scheme

ETV Bharat Logo

Copyright © 2024 Ushodaya Enterprises Pvt. Ltd., All Rights Reserved.