ETV Bharat / state

ಗೃಹಲಕ್ಷ್ಮಿ ಯೋಜನೆ ನಿತ್ಯ ಸತ್ಯ, ನಿರಂತರ; ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ: ಸಚಿವೆ ಹೆಬ್ಬಾಳ್ಕರ್​​ - Gruha Lakshmi Scheme

ಗೃಹಲಕ್ಷ್ಮೀ ಯೋಜನೆ ಅಡಿ ಕಳೆದೆರಡು ತಿಂಗಳಿಂದ ಬಾರದಿರುವ ಹಣ ಒಂದೇ ಸಲ ಮನೆ ಯಜಮಾನಿಯರ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

lakshmi hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Sep 16, 2024, 9:48 PM IST

Updated : Sep 16, 2024, 10:27 PM IST

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ (ETV Bharat)

ಬೆಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ ಸತ್ಯವಾಗಿದೆ, ನಿರಂತರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನರಿಂದ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಸಂಬಂಧ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಮನೆಗೆ ಸಚಿವರು ಸೋಮವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈಗಾಗಲೇ ಹಲವು ಸಲ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರವಾಗಿದೆ. ಕಳೆದೆರಡು ತಿಂಗಳಿಂದ ಬಾರದಿರುವ ಹಣ ಒಂದೇ ಸಲ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಮಹಿಳೆಯರ ರಕ್ಷಣೆಗೆ ಸಮಿತಿ ರಚನೆಯಾಗಲಿ: ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತಾ ಸಮಿತಿ ರಚನೆ ಆಗಬೇಕು. ನಾನು ಕೂಡ ಸಮಿತಿ ರಚನೆ ಆಗಲಿ ಎಂದು ಹೇಳುತ್ತೇನೆ. ಮುಖ್ಯಮಂತ್ರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲ, ಯಾವ ಕ್ಷೇತ್ರದಲ್ಲೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು. ಈ ಬಗ್ಗೆ ನನ್ನ ಬಳಿ ಯಾವ ನಟಿಯರೂ ಬಂದು ಮಾತನಾಡಿಲ್ಲ ಎಂದರು.

ಅಂಗನವಾಡಿಗಳಲ್ಲಿ ಮುಂದಿನ ತಿಂಗಳಿನಿಂದ ಗಟ್ಟಿಬೆಲ್ಲ ವಿತರಣೆ: ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು. ಒಂದೂವರೆ ವರ್ಷದ ಹಿಂದಿ‌ನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅಕ್ಟೋಬರ್ 1ರಿಂದಲೇ ಗಟ್ಟಿ ಬೆಲ್ಲ ಕೊಡಲಾಗುವುದು ಎಂದು ತಿಳಿಸಿದರು.

139 ಎಂಎಸ್‌ಪಿಟಿಸಿ ಉನ್ನತೀಕರಣ: ಕರ್ನಾಟಕದಲ್ಲಿರುವ 139 ಎಂಎಸ್‌ಪಿಟಿಸಿಗಳನ್ನು ಉನ್ನತೀಕರಿಸಲು ಹೊರಟಿದ್ದೇವೆ. ಉತ್ತಮ ಲ್ಯಾಬ್ ಸೌಲಭ್ಯಗಳನ್ನು ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಚೆನ್ನೈ ಮೂಲದ ಸಂಸ್ಥೆಯಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆಯಾಗುತ್ತಿದೆ. 15 ವರ್ಷಗಳಿಂದಲೂ ಇದು ನಡೆದುಕೊಂಡು ಬರುತ್ತಿದೆ. ಇನ್ಮುಂದೆ ಜಿಲ್ಲಾ ಮಟ್ಟದಲ್ಲೇ ಪೌಡರ್ ತಯಾರಿಸಲು ಸಿದ್ಧತೆ ನಡೆಸಿದ್ದು, ಇದಕ್ಕೆ 200 ಕೋಟಿ ರೂ. ವೆಚ್ಚ ಆಗಲಿದೆ ಮಾಹಿತಿ ನೀಡಿದರು.

ಇದನ್ನೂ ಓದಿ: ತೆರಿಗೆ ಸಂಗ್ರಹ ತಲೆನೋವು: ಆರ್ಥಿಕ ಹೊರೆ ಮಧ್ಯೆ ಬಜೆಟ್ ಗುರಿ ತಲುಪಲಾಗದ ತೆರಿಗೆ ರಾಜಸ್ವ ಸಂಗ್ರಹ - Tax Revenue Collection

Last Updated : Sep 16, 2024, 10:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.