ETV Bharat / state

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - GRUHALAKSHMI BENEFICIARIES

ಇಂದಿನ ವಿಧಾನಸಭೆಯ ಕಾರ್ಯ ಕಲಾಪ ವೀಕ್ಷಣೆಗೆ ಸುವರ್ಣಸೌಧದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಕಲಾಪಕ್ಕೆ ತೆರಳಿದ್ದಾರೆ.

BELAGAVI  BELAGAVI WINTER SESSION 2024  LAKSHMI HEBBALKAR  GRUHALAKSHMI
ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : 2 hours ago

ಬೆಳಗಾವಿ: "ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ‌ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ ಸಂತಸ ವ್ಯಕ್ತಪಡಿಸಿದ್ದಾರೆ" ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯದ ಪ್ರತಿಯೊಬ್ಬ ಮಹಿಳೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ನೇರವಾಗಿ ಮಹಿಳೆಯರ ಬ್ಯಾಂಕ್​ ಖಾತೆಗೆ ಎರಡು ಸಾವಿರ ರೂಪಾಯಿ ಹಾಕುವ ಯೋಜನೆಯು ನಮ್ಮ ಕನಸಿನ ಕೂಸಾಗಿತ್ತು. ಈ ಯೋಜನೆಯು ರಾಜ್ಯಾದ್ಯಂತ ಯಶಸ್ಸು ಕಂಡಿದೆ. ಈ ಹಣದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲವಾಗಿದೆ. ಗ್ರಂಥಾಲಯ, ರೈತರ ಒಕ್ಕಲುತನಕ್ಕೆ ಎತ್ತು, ಬೋರ್​ವೆಲ್ ಕೊರೆಯುವುದು, ರಥವನ್ನು ತಯಾರಿಸುವುದು, ಮಕ್ಕಳ ಶಿಕ್ಷಣಕ್ಕೆ ಸಹಾಯವಾಗುವುದರ ಜೊತೆಗೆ ಅತ್ತೆಯ- ಮಾವಂದಿರ ಕಣ್ಣಿನ ಆಪರೇಷನ್ ಮಾಡಿಸುವಷ್ಟು ಈ ಯೋಜನೆಯು ಸಫಲತೆ ಕಂಡಿದೆ" ಎಂದು ಸಂತಸ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)

"ಅಲ್ಲದೆ ಕೆಲವು ಕಡೆ ಫ್ಯಾನ್ಸಿ ಸ್ಟೋರ್ ಮಾಡಿದವರಿದ್ದಾರೆ. ಕೋವಿಡ್ ನಂತರದ ಬೆಲೆ ಏರಿಕೆಯ ಕಾಲದಲ್ಲಿ ಒಂದು ತಿಂಗಳಿಗೆ ಎರಡು ಸಿಲಿಂಡರ್ ತೆಗೆದುಕೊಳ್ಳುತ್ತಿದ್ದಾರೆ. ವರ್ಷಕ್ಕೆ 32 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಗೃಹಲಕ್ಷ್ಮಿಯರಿಗೆ ಬಿಡುಗಡೆ ಮಾಡುತ್ತಿದ್ದೇವೆ. ಮುಖ್ಯವಾಗಿ ಮಂಗಳಮುಖಿಯರೂ ಸಹ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಸುವರ್ಣ ಸೌಧಕ್ಕೆ ಆಗಮಿಸಿರುವ ಈ ಎಲ್ಲ ಗೃಹ ಲಕ್ಷ್ಮೀಯರು ಮುಖ್ಯಮಂತ್ರಿಗಳ ಜೊತೆ ಇಂದು ಸಂವಾದ ನಡೆಸಲಿದ್ದಾರೆ".

"ಸಮಾಜದ ಪ್ರತಿಯೊಂದು ಸ್ಥರದ ಮಹಿಳೆಯರೂ ಸಹ ಇಂದಿನ ಈ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಎಲ್ಲ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ವಿಧಾನಸಭೆಯ ಕಾರ್ಯ ಕಲಾಪ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲ ಸೆಕ್ರೆಟರಿಗಳ ಕಚೇರಿಗೆ ಗೃಹಲಕ್ಷ್ಮೀಯರು ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಲಿದ್ದಾರೆ" ಎಂದು ಮಾಹಿತಿ ನೀಡಿದ ಹೆಬ್ಬಾಳ್ಕರ್" ನಮ್ಮ ರಾಜ್ಯದ ಮುಖ್ಯಮಂತ್ರಿಯವರು ಬಸವಣ್ಣನವರ ತತ್ವದ ಆಧಾರದ ಮೇಲೆ ಆಡಳಿತವನ್ನು ನಡೆಸುತ್ತಿದ್ದಾರೆ" ಎಂದು ಹೇಳಿದರು.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜೊತೆಗೆ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ನೂರಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಸುವರ್ಣಸೌದ ಆವರಣದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡೆದುಕೊಂಡು ಬಂದು ಅವರ ಜೊತೆಗೆ ವಿಧಾನಸಭಾ ಕಲಾಪವನ್ನು ವೀಕ್ಷಣೆ ಮಾಡಲು ತೆರಳಿದರು.

ಇದನ್ನೂ ಓದಿ: ಕಲಾಪ ವೀಕ್ಷಿಸಲು ಬೆಳಗಾವಿ ಸುವರ್ಣಸೌಧಕ್ಕೆ ವಿದ್ಯಾರ್ಥಿಗಳ ದಂಡು: ಸಿಎಂ, ಡಿಸಿಎಂ, ಮಂತ್ರಿ - ಮಹೋದಯರನ್ನು ನೋಡಿ ಫುಲ್ ಖುಷ್..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.