ETV Bharat / state

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಸಚಿವ ಸತೀಶ್​ ಜಾರಕಿಹೊಳಿ - Minister Satish Jarakiholi

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದ್ದಾರೆ.

guarantee-schemes-are-a-model-for-the-whole-country-says-minister-satish-jarakiholi
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಸಚಿವ ಸತೀಶ ಜಾರಕಿಹೊಳಿ
author img

By ETV Bharat Karnataka Team

Published : Mar 12, 2024, 8:11 PM IST

Updated : Mar 12, 2024, 10:22 PM IST

ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ, ಹುಕ್ಕೇರಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ಬೆಳಗಾವಿ ಹಾಗೂ ಹುಕ್ಕೇರಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭೂತರಾಮನಟ್ಟಿಯ ಮುಕ್ತಿಮಠದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ನಿರುದ್ಯೋಗ ಭತ್ಯೆ, ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತಿದೆ ಎಂದರು.

ಅದೇ ರೀತಿ ಅನ್ನಭಾಗ್ಯ ಯೋಜನೆ ಯೋಜನೆಯಡಿ ಪ್ರತಿ 5 ಕೆ.ಜಿ ಅಕ್ಕಿ ಹಾಗೂ ಇನ್ನೈದು 5 ಕೆ.ಜಿ ಅಕ್ಕಿ ಬದಲಿಗೆ ಡಿಬಿಟಿ ಮೂಲಕ ಹಣ ಜಮೆ, ಗೃಹ ಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ಹಾಗೂ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಸಾರ್ವಜನಿಕ ಸೌಲಭ್ಯಗಳನ್ನು ಒದಗಿಸುವತ್ತ ಸರ್ಕಾರ ಒತ್ತು ನೀಡುತ್ತಿದೆ. ಶಾಲಾ ದುರಸ್ತಿಗಳು, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಲೋಕಾರ್ಪಣೆ, ಕೆರೆ ತುಂಬಿಸುವ, ಬ್ಯಾರೇಜ್, ಏತ ನೀರಾವರಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯಮಕನಮರಡಿ ಮತಕ್ಷೇತ್ರದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ 100 ಸರ್ಕಾರಿ ಶಾಲೆಗಳನ್ನು ನೀಡಲಾಗಿದೆ. ಅಲ್ಲದೇ ನಗರದಲ್ಲಿ 50 ಕೋಟಿ ವೆಚ್ಚದಲ್ಲಿ ಹೊಸ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ರಸ್ತೆ, ನೀರಾವರಿ ಯೋಜನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕು. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಂಡು ಪ್ರತಿಯೊಬ್ಬರೂ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ಈ ವೇಳೆ ಬೆಳಗಾವಿ ಉತ್ತರ ಶಾಸಕ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಒ ರಾಹುಲ್ ಶಿಂಧೆ, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂವಿಧಾನ ಉಳಿದರೆ ನಾವು - ನೀವು ಉಳಿಯುತ್ತೇವೆ: ಸಿಎಂ ಸಿದ್ದರಾಮಯ್ಯ

Last Updated : Mar 12, 2024, 10:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.