ETV Bharat / state

'ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಕಾಂಗ್ರೆಸ್‌ ಶಾಸಕರೇ ಧಿಕ್ಕಾರ ಹಾಕುವ ಪರಿಸ್ಥಿತಿ ಬರಲಿದೆ' - R Ashok

author img

By ETV Bharat Karnataka Team

Published : Aug 14, 2024, 2:47 PM IST

Updated : Aug 14, 2024, 2:58 PM IST

ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ತಂದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರೇ ಧಿಕ್ಕಾರ ಹಾಕುವ ಪರಿಸ್ಥಿತಿ ಬರಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ ನುಡಿದರು.

Guarantee schemes  R Ashok  Bengaluru
ಆರ್‌. ಅಶೋಕ್ (ETV Bharat)

ಬೆಂಗಳೂರು: ''ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ, ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಪರಿಸ್ಥಿತಿ ಬರುತ್ತದೆ'' ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೇ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತಂದಿದ್ದಾರೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ವಿವಿಧ ಇಲಾಖೆಗಳು ನಷ್ಟದಲ್ಲಿವೆ'' ಎಂದರು.

''ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿತ್ತು. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನೀಗ ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್‌ ಆಗಿದೆ'' ಎಂದು ಟೀಕಿಸಿದರು.

ಇತ್ತೀಚೆಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು. ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್‌ ನಾಯಕರು ಭಯಗೊಂಡು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆ'' ಎಂದರು.

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ''ಈ ಎಲ್ಲ ಬೆಳವಣಿಗೆಗಳನ್ನು ಕೇಂದ್ರ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಅವರು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ'' ಎಂದು ಸ್ಪಷ್ಟಪಡಿಸಿದರು.

''ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವೂ ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ'' ಎಂದು ಹೇಳಿದರು.

''ಸಿ.ಪಿ.ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆ'' ಎಂದರು.

ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ; ತಡರಾತ್ರಿ ಸಿಐಡಿ ಅಧಿಕಾರಿಗಳಿಂದ ಶೋಧ - CID Raid

Last Updated : Aug 14, 2024, 2:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.