ETV Bharat / state

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಸಚಿವ ಮಧು ಬಂಗಾರಪ್ಪ - Guarantee Schemes

ಶಿಕ್ಷಣ ಸಚಿವ ಮಧು ಬಂಗಾರಪ್ಪ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡುತ್ತಾ, ಯಾವುದೇ ಕಾರಣಕ್ಕೂ ಯೋಜನೆಗಳು ನಿಲ್ಲುವುದಿಲ್ಲ ಎಂದಿದ್ದಾರೆ.

Education Minister Madhubangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ (ETV Bharat)
author img

By ETV Bharat Karnataka Team

Published : Aug 15, 2024, 5:55 PM IST

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ (ETV Bharat)

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಕ್ಲೋಸ್ ಆಗಲ್ಲ. ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿ ಇರುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಶ್ಯಕತೆ ಇಲ್ಲದವರಿಗೆ ಯೋಜನೆ ತಲುಪುತ್ತಿದ್ದರೆ, ಅದನ್ನು ಗಮನಿಸಬೇಕಾಗುತ್ತದೆ ಎಂದರು.‌

ಇದೇ ವೇಳೆ, ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲಾಗುವುದು. ಫುಡ್​ ಕೋರ್ಟ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ತೆರವು ಕಾರ್ಯ ಸ್ಥಗಿತಗೊಳಿಸಲಾಗುತ್ತಿದೆ. ನ್ಯಾಯಾಲಯದಿಂದ ಆದೇಶದ ಹಿನ್ನೆಲೆಯಲ್ಲಿ ಈಗ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: 'ನನ್ನ ಶಾಲೆ ನನ್ನ ಜವಾಬ್ದಾರಿ' ಯೋಜನೆ ಚೆನ್ನಾಗಿ ನಡೆಯುತ್ತಿದೆ. ಮಳವಳ್ಳಿಯಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ ಪಬ್ಲಿಕ್ ಶಾಲೆ ಕಟ್ಟಿಸಿಕೊಟ್ಟಿದ್ದಾರೆ. ಇನ್ನು, ಅನುದಾನಿತ ಶಾಲೆಗಳಿಗೆ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂದರು.

ಇದೇ ವೇಳೆ, ನಾಳೆ ನಮ್ಮ ಕುಬಟೂರು ಗ್ರಾಮದ ಸರ್ಕಾರಿ ಶಾಲೆಗೆ 10 ಲಕ್ಷ ರೂ ಮೌಲ್ಯದ ವಸ್ತುಗಳನ್ನು ದೇಣಿಗೆ ನೀಡುತ್ತೇನೆ ಎಂದು ಹೇಳಿದರು.

ಶಾಲಾ ಮಕ್ಕಳಿಗೆ ನೋಟ್ ಬುಕ್ ಒತ್ತಡ ಕಡಿಮೆ‌ ಮಾಡಲಾಗುತ್ತಿದೆ. ಇದಕ್ಕೆ ಬುಕ್ ಬದಲು ಪೇಪರ್‌ಶೀಟ್ ನೀಡಲಾಗುತ್ತದೆ ಎಂದು ತಿಳಿಸಿದರು.

ತುಂಗಾ ಡ್ಯಾಂನ ಎಂಟನೇ ರೇಡಿಯೇಟರ್ ಗೇಟ್ ಸಮಸ್ಯೆಯ ಬಗ್ಗೆ ಟೆಂಡರ್ ಕರೆಯಲಾಗಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಜಂಟಿ ಸರ್ವೆ ನಡೆಸಲು ಸೂಚನೆ ನೀಡಲಾಗಿತ್ತು. ಈಗ ಕಂದಾಯ ಇಲಾಖೆಯಿಂದ ಶೇ.80ರಷ್ಟು ಸರ್ವೆ ಮುಗಿದಿದೆ. ಅದನ್ನು ಜಿಲ್ಲಾಧಿಕಾರಿಗಳು ಸರಿಪಡಿಸುತ್ತಾರೆ ಎಂದರು.

ಇದನ್ನೂ ಓದಿ: 'ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಯಾವುದೇ ಅಧಿಕಾರವಿಲ್ಲ' - Madhu Bangarappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.