ETV Bharat / state

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಶಿಕ್ಷಕರ ಪ್ರತಿಭಟನೆ - GUEST FACULTY PROTEST

ವೃತ್ತಿಯನ್ನು ಖಾಯಂಗೊಳಿಸುವುದು, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಬೆಳಗಾವಿ ಸುವರ್ಣ ಸೌಧದ ಬಳಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

GUEST FACULTY PROTEST
ಅತಿಥಿ ಉಪನ್ಯಾಸಕರ ಪ್ರತಿಭಟನೆ (ETV Bharat)
author img

By ETV Bharat Karnataka Team

Published : 3 hours ago

Updated : 2 hours ago

ಬೆಳಗಾವಿ: ತಮ್ಮನ್ನು ಸರ್ಕಾರ ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳಬೇಕು, ಅತಿಥಿ ಶಿಕ್ಷಕರ ಬದಲಾಗಿ ಗೌರವ ಶಿಕ್ಷಕರೆಂದು ಘೋಷಣೆ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಇಂದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುವರ್ಣ ಸೌಧದ ಬಳಿ ಇರುವ ಸುವರ್ಣ ಗಾರ್ಡನ್​ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅತಿಥಿ ಶಿಕ್ಷಕರು ಸರ್ಕಾರ ನಮ್ಮ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ‌. ರಾಜ್ಯದಾದ್ಯಂತ 45,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಾವು ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಲು ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ, ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಅತಿಥಿ ಶಿಕ್ಷಕರ ಪ್ರತಿಭಟನೆ (ETV Bharat)

ನಿರಂತರವಾಗಿ 13 ವರ್ಷಗಳಿಂದಲೂ ಈ ವೃತ್ತಿಯೇ ನಮ್ಮ ಬದುಕಿಗೆ ಆಧಾರವಾಗಿದೆ. ಆದರೆ ಇದನ್ನೇ ನಂಬಿಕೊಂಡ ನಮಗೆ ಯಾವುದೇ ರೀತಿಯ ಉದ್ಯೋಗ ಭದ್ರತೆ ಸೇರಿದಂತೆ ಕನಿಷ್ಠ ವೇತನವಾಗಲೀ ನೀಡದೆ 9 ತಿಂಗಳ ಬಳಿಕ ಮತ್ತೆ ಬೇರೆಡೆಗೆ ಕೆಲಸಕ್ಕೆ ಅಲೆದಾಡುವ ಸ್ಥಿತಿಗೆ ಸರ್ಕಾರ ನಮ್ಮನ್ನು ತಂದೊಡ್ಡಿದೆ ಎಂದು ಪ್ರತಿಭಟನಾಕಾರರು ದೂರಿದರು.

ನಮಗೆ ಸರ್ಕಾರ ನೀಡುವ 10 ಸಾವಿರ ರೂ ಹಣದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ಪ್ರತಿವರ್ಷ ತಮಗೆ ಬೇಕಾದಾಗ ಸರ್ಕಾರ ನಮ್ಮನ್ನು ನೇಮಕ ಮಾಡಿಕೊಂಡು ಮಾರ್ಚ್ 31ಕ್ಕೆ ನಡುನೀರಿನಲ್ಲಿ ಕೈ ಬಿಡುತ್ತಿದೆ ಎಂದು ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಹಣಮಂತ ಎಚ್.ಎಸ್, ಗೌರವಾಧ್ಯಕ್ಷ ಅನಂತ ನಾಯ್ಕ್, ಉಪಾಧ್ಯಕ್ಷೆ ಲೋಲಾಕ್ಷಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಕರಡಿ ಗುಡ್ಡ, ಜಂಟಿ ಕಾರ್ಯದರ್ಶಿ ಗಂಗಾಧರ ಕಟ್ಟೆ, ಖಜಾಂಚಿ ಸೌಮ್ಯ ಹೆಚ್.ಎಸ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅತಿಥಿ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಶೇಷ ಚೇತನರ ಆಕ್ರೋಶ: ಸುವರ್ಣ ಗಾರ್ಡನ್​ನಲ್ಲಿ ಪ್ರತಿಭಟನೆ ನಡೆಸಿದ ನವ ಕರ್ನಾಟಕ ವಿಕಲಚೇತನರ ಗೌರವಧನ ಸಂಘದ ಕಾರ್ಯಕರ್ತರು, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಹಿತ ಕಾಪಾಡಲು ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಸೇವೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನದಲ್ಲಿ ಸುಮಾರು 6860 ತಾಲೂಕು ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರಂಭಿಕ ದಿನಗಳಲ್ಲಿ ರೂ.750 ರಿಂದ ಆರಂಭಗೊಂಡ ಗೌರವಧನ ಪುನರ್ವಸತಿ ಕಾರ್ಯಕರ್ತರ ನಿರಂತರ ಹೋರಾಟಗಳ ಫಲದಿಂದಾಗಿ 2007 ರಲ್ಲಿ ರೂ. 3000, ಬಳಿಕ ರೂ. 6000 ಹಾಗೂ ಪ್ರಸ್ತುತ ರೂ. 9000ಕ್ಕೆ ಬಂದು ತಲುಪಿದೆ. ಇಷ್ಟೊಂದು ಕಡಿಮೆ ಗೌರವಧನ ಪಡೆಯುತ್ತಿದ್ದಾಗ್ಯೂ ಈ ಕಾರ್ಯಕರ್ತರು ಕಳೆದ 15 ವರ್ಷಗಳಿಂದ ಅತ್ಯಂತ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡರು.

ಪ್ರಮುಖವಾಗಿ ಅಂಗವಿಕಲರ ಹೆಸರಿನಲ್ಲಿ ಹಣ ನೀಡಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸುವ ಕೆಲಸ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದೆ‌‌. ಈ ರೀತಿಯ ನಕಲಿ ವೈದ್ಯಕೀಯ ಪ್ರಮಾಣ ಪತ್ರ ಪಡೆದು ಉಚಿತ ಬಸ್ ಪಾಸ್, ಪಿಂಚಣಿ, ಸರ್ಕಾರಿ ನೌಕರಿ ಹೀಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಕೆಲಸಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಈ ರೀತಿಯ ಮೋಸದಿಂದ ನಿಜವಾದ ಅಂಗವಿಕಲರಿಗೆ ಅನ್ಯಾಯವಾಗುತ್ತಿದೆ. ಈ ಕೂಡಲೇ ಸರ್ಕಾರ ಇಂತಹ ಕೃತ್ಯವನ್ನು ತಡೆಯಲು ಮುಂದಾಗಬೇಕೆಂದು ಮನವಿ ಮಾಡಿದರು.

ವಿಶೇಷಚೇತನರ ಸಂಘದ ಗೌರವಾಧ್ಯಕ್ಷ ಮಹಾದೇವ (ETV Bharat)

ಸರ್ಕಾರದ ಸೇವೆ ಸಲ್ಲಿಸುವ ಕಾರ್ಯಕರ್ತರು ಕೂಡ ವಿಕಲಚೇತನರೇ ಆಗಿದ್ದು, ಅತ್ಯಂತ ಕ್ಲಿಷ್ಟ ಪರಿಸ್ಥಿತಿಯಲ್ಲಿ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಕಾರ್ಯನಿರ್ವಹಿಸುತ್ತಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಹಿತ ಕಾಯುವುದರಲ್ಲಿ ಮುಂಚೂಣಿ ಸೇವೆ ಸಲ್ಲಿಸುತ್ತಿದ್ದೇವೆ. ಅದಕ್ಕಾಗಿ ವಿಕಲಚೇತನ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರವು ಖಾಯಂಗೊಳಿಸುವ ಅಥವಾ ಈ ಕಾರ್ಯಕರ್ತರಿಗೆ ವೇತನ ಪದ್ಧತಿ ಜಾರಿಗೆ ತರುವ ಮೂಲಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಏಳನೇಯ ವೇತನ ಆಯೋಗದಲ್ಲಿ ರಾಜ್ಯ ಸರಕಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಮಾಡಲಾಗಿದೆ. ಇದರ ಜೊತೆಗೆ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯಗಳ ಮೇಲ್ವಿಚಾರಕರ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯಲ್ಲಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಿಶೇಷಚೇತನರು ಭಾಗವಹಿಸಿದ್ದರು.

ಇದನ್ನೂ ಓದಿ: ರಾಜ್ಯದ ಹಲವೆಡೆ ಪಂಚಮಸಾಲಿ ಮೀಸಲಾತಿ ಕಿಚ್ಚು: ನಮ್ಮ ಬೇಡಿಕೆ ಸಂವಿಧಾನಬದ್ಧವಾಗಿದೆ ಎಂದ ಬಸವಜಯ ಮೃತ್ಯುಂಜಯ ಶ್ರೀ

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.