ETV Bharat / state

'ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ; ಇದು ಜಾಹೀರಾತುಗಳಿಂದ ನಡೆಯುವ ಸರ್ಕಾರ' - ಹೆಚ್​ ಡಿ ಕುಮಾರಸ್ವಾಮಿ

ಇದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣ ಉದ್ದೇಶಿಸಿ ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Feb 12, 2024, 6:15 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ. ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ದೂರಿದರು.

ಕ್ಯಾಬಿನೆಟ್ ದರ್ಜೆಗೆ ಲೆಕ್ಕ ಬೇಡವೇ?: ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ, ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ. ಕರ್ನಾಟಕ ಹಣಕಾಸು ಸಂಸ್ಥೆ (KSFC) ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುತ್ತಿರುವುದು ಉಂಟಾ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಪ್ರತೀ ವರ್ಷ ನಡೆಯುವ ಶಾಸ್ತ್ರವಷ್ಟೇ. ಪ್ರತಿ ವರ್ಷದ ಸಂಪ್ರದಾಯದಂತೆ ವಿಧಾನಸಭೆ ಕಲಾಪಗಳು ನಡೆಯುತ್ತವೆ. ಸರ್ಕಾರದ ಮುಂದಿನ ವರ್ಷದ ನೀಲನಕ್ಷೆ ಹಾಗೂ ಸಾಧನೆಗಳ ನೋಟವನ್ನು ಕೊಡಬೇಕು. ಅದನ್ನು ಮಾಡದ ಕೆಲಸಗಳ ಬಗ್ಗೆ ಡಂಗುರ ಹೊಡೆಯುವ ಕೆಲಸ ಅಷ್ಟೇ ಆಯಿತು. ಸರ್ಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರಿಂದ ಭಾಷಣ ಕೇಳಿದ್ದೇವೆ. ಆದರೆ, ಈ ಭಾಷಣ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎನ್ನುವ ರೀತಿಯಲ್ಲಿದೆ ಎಂದು ಟೀಕಿಸಿದರು.

ಜನ ಇವರಿಗೆ ಸ್ಪಷ್ಟ ಬಹುಮತದ ಸರ್ಕಾರ ಕೊಟ್ಟಿದ್ದಾರೆ. ಆದರೆ, ಇವರು ಅಸ್ಪಷ್ಟವಾಗಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಆದರೆ, ಕೇವಲ ಜನರಿಗೆ ಸರಿಯಾಗಿ ತಲುಪದ ಗ್ಯಾರಂಟಿಗಳ ಬಗ್ಗೆ ಗೌರವಾನ್ವಿತ ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರ ನುಡಿದಂತೆ ನಡೆದಿದ್ದರೆ ನಾನು ಖಂಡಿತಾ ಮೆಚ್ಚುತ್ತಿದ್ದೆ. ಆದರೆ ಇವರು ಎಲ್ಲಿಯೂ ನುಡಿದಂತೆ ನಡೆದಿಲ್ಲ. ಅದಕ್ಕೆ ನಾನು ಹೇಳಿದ್ದು. ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಖಾರ, ಹುಳಿ ಇಲ್ಲ ಎಂದು. ಇದರ ಬಗ್ಗೆ ನಾನು ಏನು ಮಾತಾಡಲಿ?. ಹದಿನೈದು ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯನವರು, ಎರಡನೇ ಬಾರಿಗೆ ಮುಖ್ಯಮಂತ್ರಿ ಆದವರು. ರಾಜ್ಯಪಾಲರಿಂದ ಮಾಡಿಸುವ ಭಾಷಣವೇ ಇದು?. ಇದು ಅತ್ಯಂತ ಕಳಪೆ ಭಾಷಣ ಎಂದು ದೂರಿದರು.

ಗ್ಯಾರಂಟಿಗಳ ಬಗ್ಗೆ..: ಗ್ಯಾರಂಟಿಗಳ ಬಗ್ಗೆ ದೇಶ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರಂತೆ. ಅಧ್ಯಯನ ಮಾಡುವವರಿಗೆ ವಾಸ್ತವ ಚಿತ್ರಣ ಗೊತ್ತಿದ್ದಂತೆ ಇಲ್ಲ. ಹಾವೇರಿ ಜಿಲ್ಲೆಯ ತಾಯಿ ಮಗ ಕೆಲಸಕ್ಕಾಗಿ ಗೋವಾಕ್ಕೆ ಗುಳೆ ಹೋದರು. ಅಲ್ಲಿಯೂ ಕೆಲಸ ಸಿಗಲಿಲ್ಲ ಎಂದು ರೈಲಿನಲ್ಲಿ ಊರಿಗೆ ವಾಪಸ್ ಬರುವಾಗ ಟಿಕೆಟ್ ಇರಲಿಲ್ಲ. ರೈಲಿನ ಟಿಕೆಟ್ ತಪಾಸಣೆ ಮಾಡುವವನು ಅವರಿಬ್ಬರನ್ನು ಧಾರವಾಡ ಜಿಲ್ಲೆಯ ಆಳ್ನಾವರದಲ್ಲಿ ರೈಲಿನಿಂದ ಇಳಿಸಿಬಿಟ್ಟ.

ಮೂರು ದಿನ ಉಪವಾಸ ಬಿದ್ದ ಆ ತಾಯಿಮಗ ಸುಸ್ತಾಗಿದ್ದರು. ತಾಯಿಗಾಗಿ ಅನ್ನ ಹುಡುಕಲು ಹೊರಟ ಮಗನಿಗೆ ಅನ್ನವೂ ಸಿಗಲಿಲ್ಲ, ಕೆಲಸವೂ ಧಕ್ಕಲಿಲ್ಲ. ಕೊನೆಗೆ ಅದೇ ಊರಿನಲ್ಲಿ ಆ ಯುವಕ ಆತ್ಮಹತ್ಯೆ ಮಾಡಿಕೊಂಡ. ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ ಆಗಿ ಅವು ಎಲ್ಲರಿಗೂ ತಲುಪಿದ್ದಿದ್ದರೆ, ಆ ತಾಯಿ ಮಗ ಗೋವಾಕ್ಕೆ ಯಾಕೆ ಹೋಗುತ್ತಿದ್ದರು? ಆ ಯುವಕ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆ ತಾಯಿ ಇವತ್ತು ಅನಾಥೆಯಾಗಿದ್ದಾರೆ. ಆದರೆ ಇವರ ಗ್ಯಾರಂಟಿ ಜಾಹೀರಾತುಗಳು ಮಾತ್ರ ಹಾಗೆಯೇ ಬರುತ್ತಿವೆ. ಈ ಸರ್ಕಾರ ಜಾಹೀರಾತು ಮೇಲೆ ನಡೆಯುತ್ತಿದೆ. ಜನಸ್ಪಂದನಕ್ಕೆ ಬಂದಿದ್ದ ಮಹಿಳೆಯರು ಗೃಹಲಕ್ಷಿ ಯೋಜನೆಯಲ್ಲಿ ಹಣ ಬಂದಿಲ್ಲ ಅಂತ ಸಿಎಂ ಅವರಿಗೆ ದೂರು ನೀಡಿದರು ಎಂದು ಗ್ಯಾರಂಟಿ ವೈಫಲ್ಯಗಳನ್ನು ಕುಮಾರಸ್ವಾಮಿ ಎಳೆಎಳೆಯಾಗಿ ಬಿಡಿಸಿಟ್ಟರು.

ನಾನು ಬಸ್​ನಲ್ಲಿ ಜನ ಕರೆತಂದು ಜನತಾದರ್ಶನ ಮಾಡಿಲ್ಲ: ನಾನು ಸಿಎಂ ಆಗಿದ್ದಾಗ ಜನತಾದರ್ಶನ ಮಾಡಿದ್ದೆ. ಅದಕ್ಕೆ ಬಸ್​ನಲ್ಲಿ ಜನರನ್ನು ಕರೆತಂದಿರಲಿಲ್ಲ. ರಾತ್ರಿ ಮೂರು ಗಂಟೆಗೆ ಬಂದು ಜನ ಕಾಯುತ್ತಿದ್ದರು. ಬೆಳಿಗ್ಗೆ 9 ಗಂಟೆಯಿಂದ ಮಧ್ಯರಾತ್ರಿವರೆಗೂ ಆ ಜನರ ಅಹವಾಲು ಕೇಳಿ ಸ್ಥಳದಲ್ಲಿಯೇ ಅವರ ಸಂಕಷ್ಟ ನಿವಾರಣೆ ಮಾಡಿದ್ದೇನೆ. ಆದರೆ, ನಾನೆಂದೂ ಜಾಹೀರಾತು ಕೊಟ್ಟುಕೊಂಡು ಪ್ರಚಾರ ಪಡೆದುಕೊಳ್ಳಲಿಲ್ಲ. ದಿನಕ್ಕೆ 100 ಸುಳ್ಳು ಹೇಳಿಕೊಂಡು ಓಡಾಡುವ ಇವರು, ರಾಜ್ಯಪಾಲರಿಂದಲೂ ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು‌ ಯಾವ ಗ್ಯಾರಂಟಿಗಳನ್ನು ತಪ್ಪು ಎಂದು ಹೇಳುವುದಿಲ್ಲ. ಗ್ಯಾರಂಟಿಗಳ ವಿಚಾರದಲ್ಲಿ ನನಗೆ ಯಾವ ತಕರಾರೂ ಇಲ್ಲ. ಬೇಕಾದರೆ ಇನ್ನು ಐದು ಗ್ಯಾರಂಟಿ ಜಾರಿ ಮಾಡಿ, ಅಭಿನಂದಿಸ್ತಿನಿ. ಆದರೆ, ಈಗಾಗಲೇ ಜಾರಿ ಮಾಡಿರುವ ಗ್ಯಾರಂಟಿಗಳು ಏನಾಗಿವೆ? ಬೆಂಗಳೂರಿನ ಭಾಗವೇ ಆಗಿರುವ ದೇವನಹಳ್ಳಿಯಲ್ಲಿ ಶಾಲಾ ಮಕ್ಕಳಿಗೆ ಬಸ್ ಇಲ್ಲ. ಮಕ್ಕಳು ಶಾಲೆಗೆ ದಿನವೂ ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಉದ್ಯೋಗ ಕೊಡುತ್ತೇವೆ ಎಂದು ಜಾಹೀರಾತು ಕೊಡುತ್ತಲೇ ಇದ್ದಾರೆ. ಇಷ್ಟು ಜನ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎನ್ನುತ್ತಿದ್ದಾರೆ. ಬರೀ ಪ್ರಸ್ತಾವನೆ ಸಲ್ಲಿಸುವುದರಲ್ಲಿಯೇ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು.

ಕಾಂತರಾಜು ವರದಿ ಸದ್ದಿಲ್ಲ: ಸಂವಿಧಾನವನ್ನು ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ. ಸ್ಲೋಗನ್ ಚೆನ್ನಾಗಿದೆ. ಆದರೆ, ನಾನು ಜಾತ್ಯತೀತ, ಧರ್ಮಾತೀತ ಎಂದು ಡಂಗುರ ಹೊಡೆದುಕೊಂಡು ತಿರುಗಾಡುವ ಈ ಮುಖ್ಯಮಂತ್ರಿ, ಧರ್ಮ - ಜಾತಿಗಳ ಹೆಸರಿನಲ್ಲಿ ಎಷ್ಟು ಸಮಾವೇಶಗಳನ್ನು ಮಾಡಿಲ್ಲ? ಬೇಕಾದರೆ ದಾಖಲೆ ತೆಗೆಯೋಣ ಎಂದ ಅವರು; ಕಾಂತರಾಜ್ ವರದಿಯ ಸದ್ದೇ ಇಲ್ಲವಲ್ಲ ಈ ಭಾಷಣದಲ್ಲಿ? ವರದಿ ಸ್ವೀಕಾರ ಮಾಡಿ ಜಾರಿ ಮಾಡುತ್ತೇನೆ ಎಂದು ಚಿತ್ರದುರ್ಗದಲ್ಲಿ ಅಬ್ಬರ ಮಾಡಿದ್ದರಲ್ಲ.‌ಈ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಚಕಾರವೇ ಇಲ್ಲ. ಜಯಪ್ರಕಾಶ್ ಹೆಗ್ಡೆ ಅವರ ಹತ್ತಿರ ಏನು ಬರೆಸ್ತಿದ್ದಿರಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು.

ಹಾಸನದಲ್ಲಿ ತಾವು ನೀಡಿದ ಹೇಳಿಕೆಯ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಕೊಟ್ಟಿರುವ ಪ್ರತಿಕ್ರಿಯೆ ಬಗ್ಗೆ ಪ್ರತಿಕ್ರಿಯಿಸಿ, ದ್ವೇಷದ ಇತಿಹಾಸವೇ ಹೌದು. ಈ ಮಣ್ಣಿನ ಗುಣವೇ ಹಾಗೆ. ದಾಯಾದಿ ಕಲಹ ನಡೆಯುತ್ತಿರುತ್ತದೆ. ಅವರು ನಡೆದಿರುವ ಘಟನೆ ಹೇಳಿದ್ದಾರೆ. ಮುಂದಿನ ಭವಿಷ್ಯವನ್ನೂ ಅವರು ಹೇಳಿದ್ದಾರೆ, ನೋಡೊಣ ಎಂದರು.

ಮೈಸೂರಿನಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗದ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿಗಳು, ನಾನು ಈ ಬಗ್ಗೆ ಅಮಿತ್ ಶಾ ಅವರಿಗೆ ಮಾಹಿತಿ ಕೊಟ್ಟಿದ್ದೆ. ಬೇರೆ ಕಾರಣದಿಂದ ಹೋಗಲು ಆಗಲಿಲ್ಲ. ಇದರಲ್ಲಿ ಯಾವುದೇ ಅನುಮಾನ, ಗೊಂದಲ ಬೇಡ ಎಂದು ತಿಳಿಸಿದರು.

ಇದನ್ನೂ ಓದಿ: ವಿಧಾನ ಮಂಡಲ ಜಂಟಿ ಅಧಿವೇಶನ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಹೊಗಳಿದ ರಾಜ್ಯಪಾಲರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.