ಬೆಂಗಳೂರು/ಹಾವೇರಿ: ಬ್ಯಾಡಗಿ ಸಮೀಪ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣಕ್ಕೀಡಾಗಿರುವುದು ತೀವ್ರ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.
ಇಂದು ಹಾವೇರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು.
— CM of Karnataka (@CMofKarnataka) June 28, 2024
ಮೃತರ ಆತ್ಮಗಳಿಗೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
- ಮುಖ್ಯಮಂತ್ರಿ @siddaramaiah #ಹಾವೇರಿಅಪಘಾತ
ಸಚಿವರು ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ರೂಪಾಯಿ ಪರಿಹಾರ ವಿತರಣೆ ಮಾಡಿದ್ದಾರೆ.
ಇಂದು ಹಾವೇರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು. ಮೃತರ ಆತ್ಮಗಳಿಗೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.