ETV Bharat / state

ಹಾವೇರಿ ಬಳಿ ಘನಘೋರ ರಸ್ತೆ ಅಪಘಾತ: ಮೂರು ಕುಟುಂಬಗಳ 13 ಮಂದಿ ಸಾವು, ಭೀಕರತೆ ಬಿಚ್ಚಿಟ್ಟ ಅಧಿಕಾರಿಗಳು - 13 Died In Haveri Accident

ಹಾವೇರಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಘನಘೋರ. ಘಟನೆ ಬಗ್ಗೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್, ಅಗ್ನಿಶಾಮಕ ಅಧಿಕಾರಿ ವಿನಾಯಕ ಮತ್ತು 108 ವಾಹನ ಚಾಲಕ ತೌಫೀಕ್ ಪಠಾಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

HAVERI ACCIDENT
ಅಪಘಾತ ಸಂಭವಿಸಿದ ಸ್ಥಳ (ETV Bharat)
author img

By ETV Bharat Karnataka Team

Published : Jun 28, 2024, 11:24 AM IST

Updated : Jun 28, 2024, 2:22 PM IST

ಭೀಕರತೆ ಬಿಚ್ಚಿಟ್ಟ ಅಧಿಕಾರಿಗಳು (ETV Bharat)

ಹಾವೇರಿ: ಬ್ಯಾಡಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಂತಿದ್ದ ಲಾರಿಗೆ ಟಿಟಿ (ಟೆಂಪೋ ಟ್ರಾವೆಲ್ಲರ್) ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಮೂರು ಕುಟುಂಬಕ್ಕೆ ಸೇರಿದ 13 ಜನರು ಮೃತಪಟ್ಟಿದ್ದು, ಘಟನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾ ಭಾಯಿ (57), ಚಾಲಕ ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50), ಆರ್ಯ (4) ಮತ್ತು ನಂದನ್ (6) ಮೃತ ದುರ್ದೈವಿಗಳು.

ಟೆಂಪೋ ಟ್ರಾವೆಲ್​​ನಲ್ಲಿ ಪಯಣಿಸುತ್ತಿದ್ದ 17 ಜನರಲ್ಲಿ 11 ಜನ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಸಮೀಪದ ಎಮ್ಮಿಗಟ್ಟಿ ಗ್ರಾಮದ ಮೂರು ಕುಟುಂಬಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಓರ್ವ ಅಜ್ಜಿ ಮತ್ತು ಓರ್ವ ಯುವತಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

HAVERI ACCIDENT
ಅಪಘಾತ ಸಂಭವಿಸಿದ ಸ್ಥಳ (ETV Bharat)

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದು ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಭೀಕರ ಅಪಘಾತದಿಂದ ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದವು. ಹರಸಾಹಸದ ಬಳಿಕ ಅಗ್ನಿಶಾಮಕ ಸಿಬ್ಬಂದಿಯು, ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯುತ್ತಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಭೀಕರ ಅಪಘಾತದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್, ಶುಕ್ರವಾರ ಮುಂಜಾನೆ ನಾಲ್ಕುಗಂಟೆ ಸುಮಾರಿಗೆ ಈ ಆಪಘಾತ ನಡೆದಿರಬಹುದು. ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂಡು ಸ್ವಗ್ರಾಮಕ್ಕೆ ವಾಪಸ್​ ಆಗುವಾಗ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ 13 ಮಂದಿಯಲ್ಲಿ ಇಬ್ಬರು ಮಕ್ಕಳಿದ್ದಾರೆ. ಒಟ್ಟು 17 ಜನ ವಾಹನದಲ್ಲಿ ಪ್ರಯಾಣಿಸಿ ದೇವರ ದರ್ಶನಕ್ಕೆ ಬಂದಿದ್ದರು. ಆಸ್ಪತ್ರೆಯಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮೇಲ್ನೋಟಕ್ಕೆ ಈ ಘಟನೆಗೆ ಅತಿಯಾದ ವೇಗವೇ ಕಾರಣ ಎಂಬ ಮಾಹಿತಿ ತಿಳಿದು ಬರುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದರು.

HAVERI ACCIDENT
ಅಪಘಾತ ಸಂಭವಿಸಿದ ಸ್ಥಳ (ETV Bharat)

ಸುಮಾರು 4:20ಕ್ಕೆ ಅಗ್ನಿ ಅಗ್ನಿಶಾಮಕ ಕಚೇರಿಗೆ ಕರೆ ಬಂದಿತು. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅದರಲ್ಲಿ ಹಲವು ಜನ ಸಿಲುಕಿದ್ದಾರೆ ಎಂಬ ಮಾಹಿತಿ ಬಂದಿತು. ತಕ್ಷಣ ನಮ್ಮ ಸಿಬ್ಬಂದಿ ಸಹಿತ ಘಟನಾ ಸ್ಥಳಕ್ಕೆ ಆಗಮಿಸಿದೆವು. ಅಪಘಾತದ ಭೀಕರತೆ ದಾರುಣವಾಗಿತ್ತು. ಮೃತದೇಹಗಳು ಅಪ್ಪಚ್ಚಿಯಾಗಿದ್ದವು. ಸೀಟು ಕಿತ್ತು ಮೃತದೇಹಗಳನ್ನು ಹೊರತೆಗೆದೆವು. ಓರ್ವ ಅಜ್ಜಿ ಸೇರಿದಂತೆ ಮೂವರು ಜೀವಂತವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದೆವು ಎಂದು ಅಗ್ನಿಶಾಮಕ ಅಧಿಕಾರಿ ವಿನಾಯಕ ಮಾಹಿತಿ ನೀಡಿದರು.

108 ವಾಹನ ಚಾಲಕ ತೌಫೀಕ್ ಪಠಾಣ್ ಮಾತನಾಡಿ, ಸುಮಾರು 3;45ಕ್ಕೆ ಈ ಘಟನೆ ನಡೆದಿರಬಹುದು. ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ತಕ್ಷಣ ಬರುವಂತೆ 108ಕ್ಕೆ ಕರೆ ಬಂದಿತು. ಲೋಕೇಶನ್​ ಇದ್ದ ಸ್ಥಳಕ್ಕೆ ಬಂದೆವು. ಆರಂಭದಲ್ಲಿ ದೊಡ್ಡ ಘಟನೆ ಆಗಿರಲಿಕ್ಕಿಲ್ಲವೆಂದು ಅಂದುಕೊಂಡೆವು. ಆದರೆ, ಅಪಘಾತದ ಭೀಕರತೆ ದೊಡ್ಡ ಮಟ್ಟದಲ್ಲೇ ಆಗಿತ್ತು. ಡಿಕ್ಕಿ ರಭಸಕ್ಕೆ ಎಲ್ಲರೂ ವಾಹನದಡಿ ಸಿಲುಕಿದ್ದರು. 17 ವರ್ಷದ ಹುಡುಕಿ ಮತ್ತು ಪುಟ್ಟ ಮಗವೊಂದು ಅಮ್ಮಾ.. ಅಮ್ಮಾ.. ಎಂದು ಅಳುತ್ತಿದ್ದವು. ಸೀಟು ಕಿತ್ತು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದೆವು. ದೃಶ್ಯ ನೋಡಿದರೆ ಕಣ್ಣೀರು ತರಿಸುವಂತಿತ್ತು ಎಂದು 108 ವಾಹನ ಚಾಲಕ ತೌಫೀಕ್ ಪಠಾಣ್ ಬೇಸರ ವ್ಯಕ್ತಪಡಿಸಿದರು.

HAVERI ACCIDENT
ಅಪಘಾತ ಸಂಭವಿಸಿದ ಸ್ಥಳ (ETV Bharat)

17 ಜನರಲ್ಲಿ 13 ಜನ ಮೃತಪಟ್ಟಿದ್ದು, ನಾಲ್ವರ ಗಾಯಗೊಂಡಿದ್ದಾರೆ. ಅದರಲ್ಲಿ ಓರ್ವನ ಸ್ಥತಿ‌ ಚಿಂತಾಜನಕವಾಗಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಇನ್ನುಳಿದ ಇಬ್ಬರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಒಬ್ಬರು ಹಾವೇರಿ ಆಸ್ಪತ್ರೆಯ ಐಸಿಯೂನಲ್ಲಿದ್ದಾರೆ. ಸರ್ಕಾರದ ಪರಿಹಾರದ ಕುರಿತು ಯಾವುದೇ ಮಾಹಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಹಿತಿ ಕೇಳಿದ್ದಾರೆ ಎಂದು ಜಿಲ್ಲಾಧಿಕಾರಿ ರಘೂನಂದನ್ ಮೂರ್ತಿ ಮಾಹಿತಿ ನೀಡಿದ್ದಾರೆ. ಅಪಘಾತದ ಸುದ್ದಿ ತಿಳಿದು ಹಾವೇರಿ ಜಿಲ್ಲಾ ಆಸ್ಪತ್ರೆಯ ಮುಂದೆ ಜಮಾವಣೆಗೊಂಡ ಮೃತರ ಸಂಬಂಧಿಕರು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಬೇಕು. ಪರಿಹಾರ ಘೋಷಣೆ ಮಾಡುವವರೆಗೂ ಅಂತ್ಯಕ್ರಿಯೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಭದ್ರಾವತಿ ಮರಾಠಾ ಸಂಘದ ಅಧ್ಯಕ್ಷ ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಟ್ವೀಟ್​: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್​ ಮಾಡಿದ್ದಾರೆ.

ಬೊಮ್ಮಾಯಿ ಆಗ್ರಹ: ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದರೂ ಆಗಿರುವ ಬಸವರಾಜ ಬೊಮ್ಮಾಯಿ ಕೂಡ ಒತ್ತಾಯಿಸಿದ್ದಾರೆ.

ಮೃತ ಕುಟುಂಬಕ್ಕೆ ಪರಿಹಾರ ನೀಡಿ: ಗುಂಡೇನಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕೂಡ ಒತ್ತಾಯಿಸಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ತೀವ್ರ ದುಃಖ ವ್ಯಕ್ತವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳು ಶಕ್ತಿ ನೀಡಲಿ. ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.

ತೀವ್ರವಾಗಿ ಗಾಯಗೊಂಡವರನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಚಾಲಕನ ಅತಿಯಾದ ವೇಗದ ಚಾಲನೆಯೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 13 ಜನರ ದಾರುಣ ಸಾವು, ಬಾಲಕನಿಗೆ ಗಾಯ - ROAD ACCIDENT IN HAVERI

Last Updated : Jun 28, 2024, 2:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.