ETV Bharat / state

ದೇವಾಲಯಗಳನ್ನು ಆರ್​ಟಿಐ ಕಾಯ್ದೆಯಿಂದ ಹೊರಗಿಡಲು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ - Priests Petition Adjourned

author img

By ETV Bharat Karnataka Team

Published : Jun 11, 2024, 7:36 PM IST

ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಕೋರಿ ಪುರೋಹಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಹೈಕೋರ್ಟ್​
ಹೈಕೋರ್ಟ್​ (ETV Bharat)

ಬೆಂಗಳೂರು: ದೇವಾಯಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ಎನ್. ಆರ್. ನಾಗರಾಜ್, ದೇವಾಲಯಗಳು ಸಾರ್ವಜನಿಕ ಸಂಸ್ಥೆಗಳು ಅಲ್ಲ ಎಂದು ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ ಹೈಕೋರ್ಟ್‌ಗಳಲ್ಲದೇ ಕರ್ನಾಟಕದ ಹೈಕೋರ್ಟ್ ಸಹ ಹೇಳಿದೆ. ಮುಖ್ಯವಾಗಿ ದೇವಸ್ಥಾನಗಳು ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ದೇವಸ್ಥಾನಗಳ ಮೇಲೆ ಸರ್ಕಾರದ ಆರ್ಥಿಕ, ಭೌತಿಕ ಅಥವಾ ಆಡಳಿತಾತ್ಮಕ ನಿಯಂತ್ರಣ ಇರುವುದಿಲ್ಲ ಎಂದು ಮಾರ್ತಾಂಡವರ್ಮ ವರ್ಸಸ್ ಕೇರಳ ರಾಜ್ಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಆದೇಶದ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದನ್ನು ಪರಿಶೀಲಿಸಿದ ನ್ಯಾಯಪೀಠ ಸುಪ್ರೀಂಕೋರ್ಟ್ ಆದೇಶದ ಪ್ರತಿಯನ್ನು ಈಗಷ್ಟೇ ವಕೀಲರು ಹಾಜರುಪಡಿಸಿದ್ದಾರೆ. ಈ ಆದೇಶವನ್ನು ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಅಲ್ಲದೆ, ಅರ್ಜಿಯಲ್ಲಿ ಹೇಳಿರುವ ದೇವಾಲಯಗಳು ಖಾಸಗಿ ಅಥವಾ ಸರ್ಕಾರಿ ದೇವಾಲಯಗಳು ಎಂಬ ಅಂಶ ತಿಳಿಯಬೇಕಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಕೋರಿರುವ ಅಂಶಗಳು: ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಅರ್ಚಕರು, ವೇದ ವಿದ್ವಾಂಸರು, ಪುರೋಹಿತರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ವೈಯಕ್ತಿಕ ಮಾಹಿತಿ ಕೇಳುವ ಮೂಲಕ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಅಲ್ಲದೆ, ಹಣ ಮತ್ತು ಬೆಲೆ ಬಾಳುವ ವಸ್ತುಗಳಿಗೆ ಬೇಡಿಕೆ ಇಡುತ್ತಾರೆ. ನೀಡದಿದ್ದಲ್ಲಿ ದೇವರಿಗೆ ಮಾಡುವ ಹೋಮ, ಅಭಿಷೇಕಗಳನ್ನು ಮಾಡಿಕೊಡುವಂತೆ ಕೋರುತ್ತಾರೆ.

ಭಕ್ತರು ದೇವರಿಗೆ ನೀಡುವ ದಾನಗಳಲ್ಲಿ ತಮಗೂ ಪಾಲು ನೀಡಬೇಕು ಎಂದು ಬೇಡಿಕೆ ಇಡುತ್ತಾರೆ. ಇದರಿಂದ ಅರ್ಚಕರ ಕಾರ್ಯ ನಿರ್ವಹಣೆಗೆ ತೊಂದರೆಯಾಗುವಂತಾಗಿದೆ. ಹೀಗಾಗಿ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಬೇಕು ಎಂದು ಕೋರಲಾಗಿದೆ. ಅಲ್ಲದೆ, ದೇವಾಲಯಗಳು ಸಾರ್ವಜನಿಕ ಪ್ರಾಧಿಕಾರಗಳಲ್ಲ ಎಂದು ಘೋಷಿಸಬೇಕು. ಆ ಮೂಲಕ ದೇವಾಲಯಗಳನ್ನು ಕಾಯ್ದೆಯಿಂದ ಹೊರಗುಳಿಸಬೇಕು.

ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ಕೇಳುವ ಮಾಹಿತಿಯನ್ನು ಒದಗಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರಗಳನ್ನು ನೇಮಿಸುವ ಸಂಬಂಧ ರಾಜ್ಯ ಸರ್ಕಾರ 2007ರ ಜೂನ್ 16 ರಂದು ಮತ್ತು 2017ರ ಫೆಬ್ರವರಿ 3 ರಂದು ಹೊರಡಿಸಿರುವ ಎರಡು ಅಧಿಸೂಚನೆಗಳನ್ನು ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಮದುವೆ ಭರವಸೆ ನೀಡಿ ಮಾತು ಉಲ್ಲಂಘಿಸಿದರೆ ಅತ್ಯಾಚಾರ ಕೇಸ್​ನಲ್ಲಿ ಅಪರಾಧವಾಗದು: ಹೈಕೋರ್ಟ್ - high court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.