ETV Bharat / state

ಪುಂಡರಿಗೆ ಬುದ್ದಿ ಕಲಿಸಿದರೆ ಎಲ್ಲ ಸರಿಯಾಗಲಿದೆ: ಹೈಕೋರ್ಟ್ - Bhagwa Dhwaj Case - BHAGWA DHWAJ CASE

ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದುಕೋರಿ ಶಿಗ್ಗಾಂವಿಯ ಮಾಜಿ ಶಾಸಕ ಸೈಯ್ಯದ್ ಅಜ್ಜಂಪೀರ್ ಖಾದ್ರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುಂಡರಿಗೆ ಬುದ್ದಿ ಕಲಿಸಿದರೆ ಎಲ್ಲ ಸರಿಯಾಗಲಿದೆ: ಹೈಕೋರ್ಟ್

author img

By ETV Bharat Karnataka Team

Published : Apr 6, 2024, 8:00 AM IST

ಬೆಂಗಳೂರು: ಪ್ರತಿ ಸಮುದಾಯದಲ್ಲಿ ಕೆಲವರು ಪುಂಡ ಸಂಸ್ಕೃತಿಯುಳ್ಳವರು ಇರುತ್ತಾರೆ. ಅಂತಹವರನ್ನು ಗುರುತಿಸಿ ಸರಿಯಾಗಿ ಬುದ್ದಿಹೇಳಿ ನಿಯಂತ್ರಣ ಮಾಡಿದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಲಿದೆ. ಇಲ್ಲದಿದ್ದಲ್ಲಿ ಇಂದು ಭಗವಾಧ್ವಜ ಇಳಿಸ್ತಾರೆ, ಮುಂದೆ ರಾಷ್ಟ್ರಧ್ವಜ ಇಳಿಸಲು ಮುಂದಾಗಿ ದೇಶದಲ್ಲಿ ಗೊಂದಲ ಸೃಷ್ಠಿ ಮಾಡುತ್ತಾರೆ ಎಂದು ಹೈಕೊರ್ಟ್ ಅಭಿಪ್ರಾಯ ಪಟ್ಟಿದೆ.

ಶಿಗ್ಗಾಂವಿ ತಾಲ್ಲೂಕಿನ ಕಾರಡಗಿ ಗ್ರಾಮದ ಜುಮ್ಮಾ ಮಸೀದಿಯ ಪಕ್ಕದಲ್ಲಿರುವ ಸರ್ಕಾರಿ ಶಾಲೆಯ ಎದುರಿಗಿನ ಸಾರ್ವಜನಿಕ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಇರುವ ಭಗವಾಧ್ವಜವನ್ನು ಕೆಳಗಿಳಿಸಿ ಗ್ರಾಮದಲ್ಲಿ ಕೋಮು ಸೌಹಾರ್ದ ಕದಡಲು ಪಿತೂರಿ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹುಲಗೂರು ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ಶಿಗ್ಗಾಂವಿಯ ಮಾಜಿ ಶಾಸಕ ಸೈಯ್ಯದ್ ಅಜ್ಜಂಪೀರ್ ಖಾದ್ರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಮೌಖಿಕವಾಗಿ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೇ, ಪ್ರಕರಣದಲ್ಲಿ ಮಾಜಿ ಶಾಸಕರೂ ಸೇರಿದಂತೆ ಆರೋಪಿಗಳಾಗಿರುವವರು ಬಳಸಿರುವ ಪದಗಳು ಸರಿ ಎನಿಸುವುದಿಲ್ಲ. ಮುಂದೆ ಸಮಾಜದಲ್ಲಿ ಏನಾದರೂ ತೊಂದರೆಯಾದರೆ ಇಡೀ ಸಮುದಾಯಕ್ಕೇ ಕೆಟ್ಟ ಹೆಸರು ಬರುತ್ತದೆ ಎಂದು ಪೀಠ ತಿಳಿಸಿತು.

ಅಲ್ಲದೇ, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿ, ವಿಚಾರಣೆ ಮುಂದೂಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿರುವ ಆರೋಪಿಗಳ ಧ್ವನಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಒಂದು ವೇಳೆ ಆರೋಪಿಗಳು ಯಾವುದಾದರೂ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದೇ ಆದರೆ ಪೊಲೀಸರು ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿತು.

ಪ್ರಕರಣದ ಹಿನ್ನೆಲೆ: ಹುಲಗೂರು ಪೊಲೀಸ್ ಠಾಣೆಯ ಸಬ್ ಇನ್ಸ್​​ಪೆಕ್ಟರ್​​ ಪರುಶರಾಮ ಕಟ್ಟೀಮನಿ 2024ರ ಮಾರ್ಚ್ 3ರಂದು ತಮ್ಮ ಮೊಬೈಲ್ ವಾಟ್ಸ್​ಆಪ್‌ನಲ್ಲಿ ಬಾತ್ಮಿದಾರರಿಂದ ಆಡಿಯೊ ಸಂದೇಶವೊಂದನ್ನು ಸ್ವೀಕರಿಸಿದ್ದರು. ಈ ಸಂಭಾಷಣೆಯಲ್ಲಿ, "ಕಾರಡಗಿ ಗ್ರಾಮದ ಅಂಜುಮನ್ ಸಮಿತಿ ಅಧ್ಯಕ್ಷ ರಬ್ಬಾನಿ ಬಿನ್ ಅಬ್ದುಲ್ ಮುನಾಫ್ ಹಾಗೂ ಮಾಜಿ ಶಾಸಕ ಸೈಯ್ಯದ್ ಅಜ್ಜಂಪೀರ್ ಖಾದ್ರಿ ಉರ್ದುವಿನಲ್ಲಿ ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ. ಈ ಸಂಭಾಷಣೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾವನೆಗಳಿವೆ ಎಂದು ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನು ರದ್ದುಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ರಸ್ತೆ ವಿಸ್ತರಣೆ: ನಾಗವನ ಉಳಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್​ಹೆಚ್‌ಎಐಗೆ ಸೂಚನೆ - High Court

ETV Bharat Logo

Copyright © 2025 Ushodaya Enterprises Pvt. Ltd., All Rights Reserved.