ETV Bharat / state

ತನಿಖಾಧಿಕಾರಿಯಿಂದ ತನಿಖಾ ವರದಿಯ ಪ್ರತಿ ಪುಟಕ್ಕೂ ಸಹಿ ಹಾಕಬೇಕೆಂದು ನಿರ್ದೇಶನ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತನಿಖಾಧಿಕಾರಿ ಕೋರ್ಟ್‌ಗೆ ಕೇಸ್‌ ಡೈರಿ ಸಲ್ಲಿಸಿದಾಗ ಡೈರಿಯ ಅದರ ಪ್ರತಿ ಪುಟದಲ್ಲೂ ಸಹಿ ಹಾಕುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 2, 2024, 8:08 AM IST

ಬೆಂಗಳೂರು : ತನಿಖಾ ಸಂಸ್ಥೆಗಳು ನಿರ್ವಹಿಸುತ್ತಿರುವ ಕೇಸ್‌ ಡೈರಿಯನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಹಿನ್ನೆಲೆಯಲ್ಲಿ ಅದರ ಪ್ರತಿ ಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇಶನ ನೀಡಬೇಕು ಎಂದು ಕೋರಿ ಕೊಲೆ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಅಲ್ಲದೆ, ನ್ಯಾಯಾಲಯ ಸದ್ಯ ಇರುವ ಕಾನೂನುಗಳಲ್ಲಿ ಕೇಸ್‌ ಡೈರಿಯಲ್ಲಿ ಸಹಿ ಹಾಕಲು ಅವಕಾಶ ನೀಡುವಂತಹ ನಿಯಮಗಳು ಇಲ್ಲದೇ ಇರುವಾಗ ಹಾಲಿ ಇರುವ ಕಾನೂನುಗಳನ್ನು ವಿಶ್ಲೇಷಣೆ ಮಾಡಬಹುದೇ ಹೊರತು, ವಿಶ್ಲೇಷಣೆ ಹೆಸರಿನಲ್ಲಿ ನ್ಯಾಯಾಲಯಗಳು ಹೊಸ ಕಾನೂನು ಜಾರಿಗೊಳಿಸುವ ಅವಕಾಶವಿರುವುದಿಲ್ಲ ಎಂದು ಪೀಠ ಹೇಳಿದೆ.

ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಮೊಹಮ್ಮದ್‌ ಶಿಯಾಬ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಅರ್ಜಿದಾರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನಿಯಮದಲ್ಲಿ ಎಲ್ಲೂ ಪ್ರತಿ ಪುಟದಲ್ಲೂ ತನಿಖಾಧಿಕಾರಿ ಸಹಿ ಹಾಕಬೇಕು ಎಂಬ ಉಲ್ಲೇಖವಿಲ್ಲ. ಆದ್ದರಿಂದ ನ್ಯಾಯಾಲಯ ಹಾಗೆ ಮಾಡುವಂತೆ ಪದಗಳನ್ನು ಸೇರ್ಪಡೆ ಮಾಡಲಾಗದು. ಹಾಗಾಗಿ ಅರ್ಜಿದಾರರ ಮನವಿ ಪುರಸ್ಕರಿಸಲಾಗದು ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಾಲಯಕ್ಕೆ ಶಾಸನ ಬದ್ಧ ನಿಯಮಗಳ ಅನ್ವಯ ಶಾಸನಗಳಲ್ಲಿ ಇರುವ ಪದಗಳನ್ನೇ ವ್ಯಾಖ್ಯಾನ ಅಥವಾ ವಿಶ್ಲೇಷಣೆ ಮಾಡುವ ಅಧಿಕಾರವಿದೆ. ಕೋರ್ಟ್‌ ತನ್ನ ವ್ಯಾಪ್ತಿಯನ್ನು ಮೀರಿ ಕಾನೂನು ಸೃಷ್ಟಿಸಲಾಗದು. ಶಾಸನವನ್ನು ರಚಿಸಿದ ನಂತರ ಅದರಲ್ಲಿರುವ ಪದಗಳನ್ನು ಹೊರತುಪಡಿಸಿ ನ್ಯಾಯಾಲಯವೇ ಹೆಚ್ಚುವರಿ ಪದಗಳನ್ನು ಸೇರ್ಪಡೆ ಮಾಡಲಾಗದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಕೊಲೆ ಪ್ರಕರಣದ ವಿಚಾರಣೆಗೆ ಕೇಸ್‌ ಡೈರಿಯನ್ನು ಹಾಜರುಪಡಿಸುವಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಿತ್ತು. ಅದರಂತೆ ತನಿಖಾಧಿಕಾರಿ ಕೇಸ್‌ ಡೈರಿ ಸಲ್ಲಿಸಿ ಅದನ್ನು ಮತ್ತೆ ವಾಪಸ್‌ ಪಡೆದುಕೊಂಡಿದ್ದರು. ಆಗ ಆರೋಪಿ ಮೊಹಮ್ಮದ್‌ ಶಿಯಾಬ್‌ ಮೆಮೋ ಸಲ್ಲಿಸಿ, ಕೇಸ್‌ ಡೈರಿಯಲ್ಲಿ ನಂತರ ಏನಾದರೂ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಸಾಧ್ಯತೆ ಇದೆ, ಹಾಗಾಗಿ ತನಿಖಾಧಿಕಾರಿ ಕೋರ್ಟ್‌ಗೆ ಕೇಸ್‌ ಡೈರಿ ಸಲ್ಲಿಸಿದಾಗ ಅದರ ಪ್ರತಿ ಪುಟದಲ್ಲೂ ಸಹಿ ಹಾಕುವಂತೆ ನಿರ್ದೇಶನ ನೀಡಬೇಕು ಎಂದು ವಿಚಾರಣಾ ನ್ಯಾಯಾಲಯವನ್ನು ಕೋರಿದ್ದರು. ಆದರೆ, ವಿಚಾರಣಾ ನ್ಯಾಯಾಲಯ 2022ರ ನ.16ರಂದು, ಆ ರೀತಿ ಪ್ರತಿ ಪುಟದಲ್ಲೂ ಸಹಿ ಹಾಕುವಂತೆ ನಿರ್ದೇಶಿಸಲು ಯಾವುದೇ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ ಏಕ ಸದಸ್ಯಪೀಠದ ಮೊರೆ ಹೋಗಿದ್ದನು. ಏಕಸದಸ್ಯಪೀಠ ಸಹ ವಿಚಾರಣಾ ನ್ಯಾಯಾಲಯದ ಆದೇಶವನ್ನೇ ಎತ್ತಿಹಿಡಿದ ಹಿನ್ನೆಲೆಯಲ್ಲಿ ಆರೋಪಿ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದನು.

ಇದನ್ನೂ ಓದಿ: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು; ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಖಾರದಪುಡಿ ಮಹೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.