ETV Bharat / state

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಸದಸ್ಯರ ಪತ್ತೆಗೆ ಅರ್ಜಿ; ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ - HIGH COURT NOTICE TO GOVT

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಸದಸ್ಯರ ಪತ್ತೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 27, 2024, 8:07 AM IST

ಬೆಂಗಳೂರು: ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಬೋಗಸ್(ನಕಲಿ) ಸದಸ್ಯರನ್ನು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಕರ್ನಾಟಕ ರಾಜ್ಯ ನಿರ್ಮಾಣ ಕಾರ್ಮಿಕರ ಕೇಂದ್ರ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಮಂಡಳಿಯಲ್ಲಿ ನಿಧಿ ಹೇಗೆ ಸಂಗ್ರಹವಾಗುತ್ತದೆ, ಕಾರ್ಡ್ ಯಾರಿಗೆ ಕೊಡುತ್ತಾರೆ, ನಿಧಿಯ ಹಣವನ್ನು ಕಾರ್ಡು ಹೊಂದಿರುವ ಸದಸ್ಯರಿಗೆ ಯಾವ ವಿಧದಲ್ಲಿ ಖರ್ಚು ಮಾಡಲಾಗುತ್ತದೆ ಎಂಬ ವಿವರಣೆಯ ಅವಶ್ಯಕತೆ ಕಂಡುಬರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಆ ವಿವರಣೆ ಒದಗಿಸಬೇಕು. ಅದೇ ರೀತಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಎರಡು ವಾರಗಳಲ್ಲಿ ಸಲ್ಲಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2019-20ರಲ್ಲಿ 17.57 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದರು. ಕೊರೊನಾ ಅವಧಿಯಲ್ಲಿ ಸದಸ್ಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಯಿತು. 2020ರಿಂದ 2023ರವರೆಗೆ ಸದಸ್ಯರ ಸಂಖ್ಯೆ 47 ಲಕ್ಷಕ್ಕೆ ಏರಿಕೆಯಾಯಿತು. ಅನುಮಾನ ಮೂಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಯಿತು. ಹಾವೇರಿ ಜಿಲ್ಲೆಯೊಂದರಲ್ಲೇ 2.94 ಲಕ್ಷ ಸದಸ್ಯರಲ್ಲಿ 2.23 ಲಕ್ಷ ಬೋಗಸ್ ಸದಸ್ಯರಿದ್ದರು. ಜಿಲ್ಲೆಯಲ್ಲಿ ಅರ್ಹ ಸದಸ್ಯರಿದ್ದರೆ 50 ಸಾವಿರ ರೂ. ಸೌಲಭ್ಯಗಳು ಸಿಗುತ್ತವೆ ಎಂಬ ಕಾರಣಕ್ಕೆ ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ಜನ ನೋಂದಾಯಿಸಿಕೊಂಡಿದ್ದಾರೆ. ಆದ್ದರಿಂದ ಕಾರ್ಮಿಕರ ಆಯುಕ್ತರ ನೆರವು ಪಡೆದುಕೊಂಡು ಈ ಬೋಗಸ್ ಸದಸ್ಯರನ್ನು ಪತ್ತೆ ಹಚ್ಚಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನಿಖೆ ನಡೆಸಬೇಕು ಹಾಗೂ ಅಂತಹ ಬೋಗಸ್ ಸದಸ್ಯರನ್ನು ತೆಗೆದು ಹಾಕುವಂತೆ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬೇರೆ ಕಾರ್ಯಗಳಿಗೆ ಬಳಕೆ: ಹೈಕೋರ್ಟ್ ತೀವ್ರ ತರಾಟೆ - High Court

ETV Bharat Logo

Copyright © 2025 Ushodaya Enterprises Pvt. Ltd., All Rights Reserved.