ETV Bharat / state

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ - Prajwal Revanna - PRAJWAL REVANNA

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 5, 2024, 3:57 PM IST

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆ ಮತ್ತು ಸಿಐಡಿ ದಾಖಲಿಸಿರುವ ಎಫ್‌ಐಆರ್ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಅರ್ಜಿ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ರೆಗ್ಯೂಲರ್ ಜಾಮೀನು ಕೋರಿದ್ದಾರೆ. ಆದರೆ, ಹೈಕೋರ್ಟ್ ರಿಜಿಸ್ಟ್ರಾರ್​ ಕಚೇರಿ ಆಕ್ಷೇಪಣೆಗಳನ್ನು ಎತ್ತಿದ್ದು, ಅದನ್ನು ಸರಿ ಪಡಿಸುವುದಕ್ಕಾಗಿ ಕಾಲಾವಕಾಶ ನೀಡಿಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲಿ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಆರೋಪ ಸಂಬಂಧ ಸಿಐಡಿ ಇತ್ತೀಚೆಗೆ ಎರಡನೇ ಎಫ್‌ಐಆರ್ ದಾಖಲಿಸಿದ್ದು, ಈ ಪ್ರಕರಣದಲ್ಲಿ ಈವರೆಗೂ ತನಿಖಾಧಿಕಾರಿಗಳು ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಕುರಿತಂತೆ ಆರೋಪಿ ಪ್ರಜ್ವಲ್​ ರೇವಣ್ಣಗೆ ಜಾಮೀನು ನಿರಾಕರಿಸಿ 2024ರ ಜೂ.26 ರಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಅವರು ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ದರ್ಶನ್, ಪವಿತ್ರಾ ಗೌಡ ಆಪ್ತರ ವಿಚಾರಣೆಗೆ ಮುಂದಾದ ಪೊಲೀಸರು - Renukaswamy Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.