ETV Bharat / state

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - Yogesh gowda murder case

ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದೆ.

Etv Bharat
Etv Bharat
author img

By ETV Bharat Karnataka Team

Published : Mar 16, 2024, 6:59 AM IST

ಬೆಂಗಳೂರು: ಧಾರವಾಡ ಜಿಲ್ಲೆ ಹೆಬ್ಬಳ್ಳಿಯ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪ ಕೈಬಿಡುವಂತೆ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್​ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ದೋಷಾರೋಪಣೆ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಶಾಸಕ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪು ಕಾಯ್ದಿರಿಸಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ದೋಷಾರೋಪ ಪಟ್ಟಿಯಲ್ಲಿನ ಎಲ್ಲಾ ದಾಖಲೆಗಳನ್ನು ಆರೋಪಿಗೆ ಒದಗಿಸಿಲ್ಲ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್, ಶಸ್ತ್ರಾಸ್ತ್ರ ಕಾಯ್ದೆ 1959ರ ಪ್ರಕಾರ ಮೊದಲ ಆರೋಪಿ ಬಸವರಾಜ ಮುತ್ತಗಿ ಮೇಲೆ ಮಾತ್ರವೇ ಪೂರ್ವಾನುಮತಿ ಪಡೆದಿದೆ. ವಿನಯ್​ ಕುಲಕರ್ಣಿ ಮೇಲೆ ಪಡೆದಿಲ್ಲ. ವಿನಯ್ ಕುಲಕರ್ಣಿ ವಿರುದ್ಧ ವಿಶೇಷ ನ್ಯಾಯಾಲಯ ದೋಷಾರೋಪ ನಿಗದಿಪಡಿಸುವಾಗ ಶಸ್ತ್ರಾಸ್ತ್ರ ಕಾಯ್ದೆಯನ್ನೂ ಅಡಕಗೊಳಿಸಿರುವುದು ತಪ್ಪು ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದರು. ಸಿಬಿಐ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ಕೈವಾಡ ಇರುವುದು ಸಾಕ್ಷ್ಯಾಧಾರಗಳಿಂದ ತಿಳಿದು ಬಂದಿದೆ. ಆದ್ದರಿಂದ ಅರ್ಜಿ ವಜಾಗೊಳಿಸಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಮುಂದುವರೆಯಲು ಅವಕಾಶ ಕಲ್ಪಿಸಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ಪೀಠ, ತೀರ್ಪು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್​ ಸದಸ್ಯ ಮತ್ತು ಬಿಜೆಪಿ ನಾಯಕ ಯೋಗೀಶ್‌ಗೌಡ ಗೌಡರ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿ, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರುವರಿ 1ರ ವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್​ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು 2020ರ ನವೆಂಬರ್​ನಲ್ಲಿ ಬಂಧಿಸಿ, ಒಂಬತ್ತು ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ವಿರುದ್ಧದ ದೋಷಾರೋಪಣೆಯಲ್ಲಿ ದೋಷಗಳಿವೆ ಎಂದ ವಕೀಲರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.