ETV Bharat / state

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಅನಂತಕುಮಾರ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

author img

By ETV Bharat Karnataka Team

Published : Mar 16, 2024, 7:24 AM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Etv Bharat
Etv Bharat

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಪಡಿಸುವಂತೆ ಕೋರಿ ಸಂಸದ ಅನಂತಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿತು. ಜೊತಗೆ, ಪ್ರತಿವಾದಿಗಳಾದ ಮುಂಡಗೋಡು ಠಾಣಾ ಪೊಲೀಸರು ಮತ್ತು ದೂರುದಾರರಾದ ಠಾಣೆಯ ಮುಖ್ಯಪೇದೆಗೆ ನೋಟಿಸ್ ಜಾರಿಗೊಳಿಸಿತು.

2024ರ ಫೆ.23ರಂದು ಮುಂಡಗೋಡು ತಾಲೂಕಿನ ಪಾಳಾ ಗ್ರಾಮ ಮತ್ತು ಇಂದೂರ ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ನಡೆದಿತ್ತು. ಸಭೆಯಲ್ಲಿ ಅರ್ಜಿದಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ‘ಸಿದ್ರಾಮುಲ್ಲಾ ಖಾನ್ ಸರ್ಕಾರವನ್ನು ನಾವೆಲ್ಲೂ ನೋಡಿಲ್ಲ. ಅತ್ಯಂತ ಹೇಸಿಗೆ ಬರುವ ರೀತಿ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವಲ್ಲಿ ನಿರತರಾಗಿದ್ದಾರೆ. ಇವರ ಕೈಯಲ್ಲಿ ಅಧಿಕಾರ ಕೊಟ್ಟರೆ ನಮ್ಮನ್ನು ಮಾರಾಟ ಮಾಡುತ್ತಾರೆ. ಹಿಂದೂಗಳ ದೇವಸ್ಥಾನದ ಹುಂಡಿಗೆ ಹಾಕಿದ ಹಣವನ್ನು, ಚರ್ಚ್, ಮಸೀದಿಗೆ ಕೊಡುತ್ತಾರೆ. ಹಿಂದೂಗಳ ದೇವಸ್ಥಾನದಲ್ಲಿ ದೇವರಿಲ್ಲವೇ?' ಎಂದು ಹೇಳಿಕೆ ನೀಡಿದ್ದರು.

ಈ ಸಂಬಂಧ ಮುಂಡಗೋಡು ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಅರ್ಜಿದಾರರ ಹೇಳಿಕೆ, ಸಭೆಯಲ್ಲಿ ಹಾಜರಿದ್ದ ಯುವಕರಿಗೆ ದಾರಿ ತಪ್ಪಿಸುವಂತಿದೆ. ಜಾತಿ- ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಅನಂತಕುಮಾರ್ ಹೆಗಡೆ ಆಕ್ಷೇಪಾರ್ಹ ಪದ ಬಳಕೆ: ಹೈಕೋರ್ಟ್ ಅಸಮಾಧಾನ

ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪ್ರಧಾನ ಜಿಲ್ಲಾ (ಕಿರಿಯ ಶ್ರೇಣಿ) ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇದರಿಂದ ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಂಸದರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಭಟ್ಕಳ ಠಾಣೆ ಎಫ್‌ಐಆರ್‌ಗೂ ತಡೆ: 2024ರ ಜ.21 ಮತ್ತು 30ರಂದು ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನಲ್ಲಿ ಅನಧಿಕೃತವಾಗಿ ಧ್ವಜದ ಕಟ್ಟೆ ಕಟ್ಟಿದ ಮತ್ತು ಆ ಕಟ್ಟೆಗೆ ವೀರ ಸಾವರ್ಕರ್ ಎಂದು ನಾಮಫಲಕ ಅಳವಡಿಸಿ, ಧಜ್ವ ಸ್ತಂಭಕ್ಕೆ ಭಗವಾ ಧ್ವಜ ಅಳವಡಿಸಿದ ಪ್ರಕರಣ ಸಂಬಂಧ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಭಟ್ಕಳ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೂ ಹೈಕೊರ್ಟ್‌ ತಡೆಯಾಜ್ಞೆ ನೀಡಿದೆ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾದ ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ಪ್ರಕರಣ ದೂರುದಾರ ಹೆಬ್ಳಿ ಪಂಚಾಯತಿ ಪಿಡಿಒ ಮಂಜುನಾಥ ಎಂ. ಗೋಂಡ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.