ETV Bharat / state

'ಸಿಎಂ ಸಿದ್ದರಾಮಯ್ಯ ಅಹಂಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು': ಹೆಚ್.ಡಿ. ದೇವೇಗೌಡ - HD Deve Gowda - HD DEVE GOWDA

"ಸಿಎಂ ಸಿದ್ದರಾಮಯ್ಯ ಜೆಡಿಎಸ್​ನಲ್ಲೇ ಬೆಳೆದು ಮತ್ತೆ ಜೆಡಿಎಸ್ ಪಕ್ಷ ಮುಗಿಸಬೇಕು ಎಂದು ಕರೆ ನೀಡಿದ್ದು, ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು" ಎಂದು ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಹೆಚ್.ಡಿ. ದೇವೇಗೌಡ
ಹೆಚ್.ಡಿ. ದೇವೇಗೌಡ
author img

By ETV Bharat Karnataka Team

Published : Apr 1, 2024, 8:31 AM IST

Updated : Apr 1, 2024, 9:04 AM IST

ಜೆಡಿಎಸ್​ ಕಾರ್ಯಕರ್ತರ ಸಭೆ

ಹಾಸನ: "ಜೆಡಿಎಸ್​ನಲ್ಲೇ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಸಿಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು" ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕರೆ ಕೊಟ್ಟಿದ್ದಾರೆ.

ಹಾಸನ ತಾಲೂಕಿನ ಸಾಲಗಾಮೆಯಲ್ಲಿ ಭಾನುವಾರದಂದು ನಡೆದ ಜೆಡಿಎಸ್​ ಕಾರ್ಯಕರ್ತರ ಸಭೆ ಉದ್ದೇಶಿಸಿ ದೇವೇಗೌಡರು ಮಾತನಾಡಿದರು. 'ನಮ್ಮ ಪಕ್ಷದಲ್ಲೇ ಬೆಳೆದು ಈಗ ಅಧಿಕಾರದ ಅಹಂ ನಿಂದ ಬಾಯಿಗೆ ಬಂದಂತೆ ಮಾತನಾಡುವ ಜೊತೆಗೆ ಹಾಸನಕ್ಕೆ ಮೂರು ಬಾರಿ ಬಂದು ಪ್ರಜ್ವಲ್​​​ ರೇವಣ್ಣ ಅವರನ್ನು ಸೋಲಿಸಲು ಮುಂದಾಗಿರುವ ಕಾಂಗ್ರೆಸ್​ ನಾಯಕರಿಗೆ ಈ ಬಾರಿ ಮುಖಭಂಗ ಮಾಡುವ ಕೆಲಸವನ್ನು ನನ್ನ ಜಿಲ್ಲೆಯ ಜನರು ಮಾಡಬೇಕಿದೆ' ಎಂದರು.

'ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಸಲುವಾಗಿ ಕೇಂದ್ರ ಹಣ ನೀಡುತ್ತಿಲ್ಲ ಎಂದು ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಧಾವೆ ಹೂಡಿದೆ. ಪ್ರಬಲವಾದ ಪ್ರಧಾನಮಂತ್ರಿ ಇದ್ದರೆ ಇವರು ಕೇಳಿದಂತೆ ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ಪ್ರಬಲವಾದ ಪ್ರಧಾನಿ ದೇಶಕ್ಕೆ ಇರಬಾರದು ಎಂದಿದ್ದಾರೆ. ಈ ಬಗ್ಗೆ ಜನ ಯೋಚಿಸುವ ಅಗತ್ಯವಿದೆ'.

'ದೇಶದ ಆಡಳಿತ ವ್ಯವಸ್ಥೆಯಲ್ಲಿ ಫೈನಾನ್ಸ್ ಕಮಿಷನ್ ಪ್ರತಿ 5 ವರ್ಷದ, ಎಲ್ಲಾ ರಾಜ್ಯದ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಆರ್ಥಿಕ ಸಮಸ್ಯೆಗೆ ಬೇಕಾಗಿರುವ ಹಣವನ್ನು ಒದಗಿಸುವ ಕೆಲಸ ಮಾಡುತ್ತದೆ. ಆದರೆ, ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ದಾವೆ ಹೂಡುವುದು ಎಷ್ಟು ಸರಿ' ಎಂದು ಪ್ರಶ್ನಿಸಿದರು.

'ಜೆಡಿಎಸ್​​ ಎಲ್ಲಿದೆ ಎಂದು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಅವರಿಗೆ ಜೆಡಿಎಸ್​ ಎಲ್ಲಿದೆ ಎಂಬುದನ್ನು ತೋರಿಸುತ್ತೇನೆ. ಈ ಭಾಗದ ಎಲ್ಲ ಜನರು ಜೆಡಿಎಸ್ ​ ​- ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಕೆಲಸ ಮಾಡಬೇಕು' ಎಂದು ಮನವಿ ಮಾಡಿದರು.

ಇದನ್ನೂ ಓದಿ: ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ನಾಯಕನೆಂದರೆ ಅದು ಕುಮಾರಸ್ವಾಮಿ: ನಿಖಿಲ್​ - Nikhil Kumaraswamy

Last Updated : Apr 1, 2024, 9:04 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.