ETV Bharat / state

ಪೆನ್ ಡ್ರೈವ್ ಬಿಡುಗಡೆಯಲ್ಲಿ ಕುಮಾರಸ್ವಾಮಿ-ಮೈತ್ರಿ ನಾಯಕರ ಕೈವಾಡ: ಡಿ.ಕೆ. ಸುರೇಶ್ - Hassan Pen Drive Case

author img

By ETV Bharat Karnataka Team

Published : May 1, 2024, 3:21 PM IST

Updated : May 1, 2024, 8:10 PM IST

ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸುವ ಮೂಲಕ ಕುಮಾರಸ್ವಾಮಿ ಆರೋಪಕ್ಕೆ ಸಂಸದ ಡಿ. ಕೆ. ಸುರೇಶ್​ ಪ್ರತಿಕ್ರಿಯಿಸಿದ್ದಾರೆ.

ಡಿ.ಕೆ. ಸುರೇಶ್
ಡಿ.ಕೆ. ಸುರೇಶ್

ಡಿ.ಕೆ. ಸುರೇಶ್

ಬೆಂಗಳೂರು: “ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ. ಕೆ. ಸುರೇಶ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದದ್ದದ್ದು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಅವರೀಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ" ಎಂದು ಟೀಕಿಸಿದರು.

"ಇಲ್ಲಿ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ, ಆ ಭಾಗದ ಐನೂರಕ್ಕಿಂತ ಹೆಚ್ಚು ಸಂತ್ರಸ್ತೆಯರಿಗೆ ರಕ್ಷಣೆ, ನ್ಯಾಯ ಒದಗಿಸುವುದು ಮುಖ್ಯವೋ? ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೇ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೇ ಇರಲು ಅವರಿಗೆ ಆಗುವುದಿಲ್ಲ” ಎಂದರು.

ನಿಮ್ಮ ವಿರುದ್ಧ ಯಾವ ಜಿದ್ದು ಸಾಧಿಸುತ್ತಿದ್ದಾರೆ ಎಂದು ಕೇಳಿದಾಗ, “ಯಾವ ಜಿದ್ದೋ ಗೊತ್ತಿಲ್ಲ. ಅವರದ್ದು ಮಾಜಿ ಪ್ರಧಾನಮಂತ್ರಿಗಳ ದೊಡ್ಡ ಕುಟುಂಬವಲ್ಲವೇ? ಅವರ ಕುಟುಂಬದ ಬಗ್ಗೆ ನಮಗೇನು ಗೊತ್ತು” ಎಂದು ಹೇಳಿದರು.

ದೇವರಾಜೇಗೌಡ ಪದೇ ಪದೆ ಡಿ.ಕೆ. ಶಿವಕುಮಾರ್ ಅವರ ಹೆಸರು ಪ್ರಸ್ತಾಪ ಮಾಡುತ್ತಿರುವುದೇಕೆ ಎಂದು ಕೇಳಿದಾಗ, “ಅವರವರು ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇನ್ನು ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು. ಹೀಗಾಗಿ ಬಹಿರಂಗವಾಗಿ ಪ್ರಜ್ವಲ್​ಗೆ ತಿದ್ದುಕೊಳ್ಳುವಂತೆ ಹೇಳುತ್ತೇನೆ ಎಂದಿದ್ದರು. ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು” ಎಂದರು.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ. ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್​ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ ವಿಚಾರ ಚರ್ಚೆಯಾಗುತ್ತಿದೆ” ಎಂದರು.

ಪ್ರಕರಣದ ಪಾರದರ್ಶಕ ತನಿಖೆ ಬಗ್ಗೆ ಕೇಳಿದಾಗ, “ಅದು ಸರ್ಕಾರದ ಕೆಲಸ. ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಇದರಲ್ಲಿ ನಮ್ಮ ಮಾತೇನಿದೆ? ಅಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎನ್ನುವುದಷ್ಟೇ ನನ್ನ ಒತ್ತಾಯ” ಎಂದರು.

ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಕೇಳಿದಾಗ, “ಅದು ಅವರ ಕುಟುಂಬದ ಪಕ್ಷ. ಅಲ್ಲಿ ಯಾವಾಗ ಬೇಕಾದರೂ ಅಮಾನತು ಮಾಡುತ್ತಾರೆ. ಯಾವಾಗ ಬೇಕಾದರೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ. ಜನತಾ ದಳ ದೇವೇಗೌಡರ ಕುಟುಂಬದ ಆಸ್ತಿ” ಎಂದು ಹೇಳಿದರು.

ಜ.27 ರಂದು ಸೂರಜ್ ರೇವಣ್ಣ ಅವರು ಈ ವಿಚಾರಕ್ಕೆ ಭೇಟಿಯಾಗಿದ್ದರು ಎಂಬ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, “ಅನವಶ್ಯಕವಾಗಿ ಈ ರೀತಿ ಚರ್ಚೆ ತಪ್ಪು. ಬೇರೆ ಕೆಲಸ ಕಾರ್ಯಗಳ ವಿಚಾರವಾಗಿ ಸೂರಜ್ ರೇವಣ್ಣ, ಶಿವಕುಮಾರ್ ಅವರನ್ನು ಭೇಟಿ ಮಾಡಿರಬಹುದು” ಎಂದರು.

ಸಂತ್ರಸ್ತೆ ದೂರು ಕೊಟ್ಟರೆ ಶಾಸಕರ ವಿರುದ್ಧ ಕಾನೂನು ಕ್ರಮ:‌ ಶಾಸಕರೊಬ್ಬರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ, “ಮಾಡಲಿ ಸಂತೋಷ. ಸಂತ್ರಸ್ತೆ ದೂರು ನೀಡಿದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ” ಎಂದು ತಿಳಿಸಿದರು.

ನಿಮ್ಮ ಆಪ್ತರೆಂದು ವಿಡಿಯೋ ವೈರಲ್ ಮಾಡಿದ್ದಾರಾ ಎಂದು ಕೇಳಿದಾಗ, “ಅಂತಹ ನೂರೆಂಟು ಇವೆ. ಬಾಂಬೆ ಬ್ಲೂ ಬಾಯ್ಸ್​​ಗಳದ್ದು ಆಯ್ತು, ಯೋಗೇಶ್ವರ್ ಅವರು ಎಲ್ಲ ಮಠಗಳ ಪ್ರವಾಸ ಮಾಡಿದ್ದು ಆಯ್ತಾ? ಮಠದವರು ನಿಮ್ಮ ಬಳಿ ಖಾಸಗಿಯಾಗಿ ಆ ಬಗ್ಗೆ ಮಾತಾಡಿರಬೇಕಲ್ಲವೇ? ಅಮಿತ್ ಶಾ ಬಳಿ ಹೋಗಿ ಕೊಟ್ಟಿದ್ದಾಯ್ತು. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರು ಬದಲಾವಣೆಯಾಗಲು ಕಾರಣವೇನು? ಅದನ್ನು ಯೋಗೇಶ್ವರ್ ಅವರೇ ಹೇಳಿದ್ದಾರೆ. ಹೀಗಾಗಿ ಒಬ್ಬೊಬ್ಬರದ್ದು ಒಂದೊಂದು ಇರುತ್ತದೆ” ಎಂದು ತಿಳಿಸಿದರು.

ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿಕೊಡುವುದು ಎಷ್ಟು ಮುಖ್ಯವೋ ವಿಡಿಯೋ ಬಿಡುಗಡೆ ಮಾಡಿದವರಿಗೆ ಶಿಕ್ಷೆಯಾಗುವುದು ಅಷ್ಟೇ ಮುಖ್ಯವಲ್ಲವೇ ಎಂದು ಕೇಳಿದಾಗ, “ಯಾರೆಲ್ಲಾ ಕಾನೂನು ಚೌಕಟ್ಟಿನಲ್ಲಿ ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇದು ಒಬ್ಬರ ವಿಚಾರವಲ್ಲ, ನೂಲಿನಂತೆ ಸೀರೆ ಎಂದು ಯಾರೋ ವ್ಯಾಖ್ಯಾನ ಮಾಡುತ್ತಿದ್ದರು. ಮೇಲಿನಿಂದಲೂ ಇದೇ ರೀತಿ ಇದೆಯಂತೆ. ಹಾಸನದಲ್ಲಿ ಹೋಗಿ ಒಂದು ರೌಂಡ್ ಹಾಕಿ, ಎಲ್ಲೆಲ್ಲಿ ಏನು ಚರ್ಚೆಯಾಗುತ್ತಿದೆ ಗೊತ್ತಾಗುತ್ತದೆ” ಎಂದರು.

ರಕ್ಷಾ ರಾಮಯ್ಯ
ರಕ್ಷಾ ರಾಮಯ್ಯ

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಕರೆತರಲು ಎಸ್ಐಟಿ ಪ್ರಯತ್ನ ಮಾಡುತ್ತಿದೆ- ಡಾ.ಜಿ. ಪರಮೇಶ್ವರ್ - HASSAN PEN DRIVE CASE

Last Updated : May 1, 2024, 8:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.