ETV Bharat / state

ದೇವರ ಅನುಗ್ರಹ, ಜನರ ಪ್ರಾರ್ಥನೆ ಫಲ ಕೊಟ್ಟಿದೆ: ಹೆಚ್​ಡಿಕೆ - H D Kumaraswamy Heart Surgery

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಬಳಿಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಆಗಮಿಸಿದರು.

Etv Bharat
Etv Bharat
author img

By ETV Bharat Karnataka Team

Published : Mar 24, 2024, 12:59 PM IST

Updated : Mar 24, 2024, 1:21 PM IST

ಬೆಂಗಳೂರಲ್ಲಿ ಕುಮಾರಸ್ವಾಮಿ

ಬೆಂಗಳೂರು: ಇದು ನನಗೆ ಮರುಜನ್ಮ. ನಾಡಿನಾದ್ಯಂತ ಜನ ನನ್ನ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿದ್ರು. ಆ ದೇವರ ಅನುಗ್ರಹ, ಜನರ ಪ್ರಾರ್ಥನೆ ಫಲ ಕೊಟ್ಟಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಚೆನ್ನೈನಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಪಡೆದು ಬೆಂಗಳೂರಿಗೆ ಆಗಮಿಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಎರಡು ಬಾರಿ ನನಗೆ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು. ಅದರಲ್ಲಿ ಲೋಪದೋಷಗಳಾಗಿದ್ದವು. ಚಿಕಿತ್ಸೆ ಮೂಲಕ ಸರಿಪಡಿಸಲಾಗಿದೆ. ಇಂದಿನ ಟೆಕ್ನಾಲಜಿಯಿಂದ ನನ್ನ ಜೀವ ಉಳಿಯಿತು. ಇಲ್ಲದಿದ್ದರೆ ಕಷ್ಟ ಆಗಿರುವುದು. ನನಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಸಹ ಸಾಯಿಬಾಬಾ ಭಕ್ತರು. ಅವರೂ ಕೂಡ ನನಗಾಗಿ ದೇವರಲ್ಲಿ ಪ್ರಾರ್ಥಿಸಿದರು. ಸಾಯಿ ಬಾಬಾ ಬಂದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆ ವೈದ್ಯರು ಹೇಳಿದ್ದಾಗಿ ಹೆಚ್​ಡಿಕೆ ತಿಳಿಸಿದರು.

ಮೂರ್ನಾಲ್ಕು ದಿನ ವಿಶ್ರಾಂತಿ: ಮುಂದಿನ ಮೂರ್ನಾಲ್ಕು ದಿನ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತೇನೆ. ನಂತರ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. 25 ದಿನಗಳ ಕಾಲ ನನ್ನ ಕೈಲಾದಷ್ಟು ಪ್ರಚಾರ ಮಾಡಿ ಎನ್​ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡ್ತೀನಿ ಎಂದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿ: ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್​​ಗೆ ರಾಜ್ಯ ಸರ್ಕಾರದಿಂದ ರಿಟ್ ಅರ್ಜಿ ವಿಚಾರವಾಗಿ ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಾ, ಅದೆಲ್ಲ ಸ್ಟಂಟ್ ಅಷ್ಟೇ. ಸುಪ್ರೀಂ ಕೋರ್ಟ್‌ಗೆ ಹೋಗೋದು, ನಮ್ಮ ದುಡ್ಡು, ನಮ್ಮ ತೆರಿಗೆ ನಮ್ಮ ಹಕ್ಕು ಇದೆಲ್ಲ ಡ್ರಾಮ ಬಿಟ್ಟು ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.

ಇನ್ನು ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಂಡ್ಯ ಅಭ್ಯರ್ಥಿ ವಿಚಾರ ಇನ್ನೆರಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮಾಜಿ ಸಿಎಂ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ: ನಿಖಿಲ್ ಕುಮಾರಸ್ವಾಮಿ ಮಾಹಿತಿ - HD Kumaraswamy Heart Surgery

ಮಾರ್ಚ್ 21 ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಕುರಿತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 'ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು' ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ತಂದೆ ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದರು.

Last Updated : Mar 24, 2024, 1:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.