ETV Bharat / state

ಹೆಚ್​​ಎಂಟಿ ಕಾರ್ಖಾನೆ ಉಳಿಸುವಂತೆ ಕಾರ್ಮಿಕರ ಅಳಲು: ಭಾವುಕರಾದ ಹೆಚ್.ಡಿ. ಕುಮಾರಸ್ವಾಮಿ - HMT Revival - HMT REVIVAL

ಹೆಚ್​ಎಂಟಿ ಕಾರ್ಖಾನೆಯ ಪುನರುದ್ಧಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆಯಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ
ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆಯಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ (ETV Bharat)
author img

By ETV Bharat Karnataka Team

Published : Oct 5, 2024, 7:53 PM IST

ಬೆಂಗಳೂರು: ಮೈಸೂರು ಅರಸರು ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ ಹೆಚ್​​ಎಂಟಿ ಕಾರ್ಖಾನೆ ಸ್ಥಾಪನೆಯಾಗಿದೆ. ಒಂದು ಕಾಲದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಅನನ್ಯ ಕೊಡುಗೆ ನೀಡಿದ್ದ ಈ ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಕೆಲ ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆಯ ಟೂಲ್ಸ್ ಮತ್ತು ಮಶೀನ್ ವಿಭಾಗಕ್ಕೆ ಇಂದು ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಈ ಕಾರ್ಖಾನೆಯ ಪುನರುದ್ಧಾರದ ಬಗ್ಗೆ ಅನೇಕ ಸಭೆಗಳು ಆಗಿವೆ. ಎಲ್ಲಾ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆದಿದೆ ಎಂದು ತಿಳಿಸಿದರು.

ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆಯಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ
ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆಯಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ (ETV Bharat)

ಕಾರ್ಖಾನೆ ಉಳಿಸುವ ವಿಚಾರದಲ್ಲಿ ನಾನು ರಾಜಿ ಆಗಲ್ಲ, ಅದಕ್ಕೆ ಅಗತ್ಯ ಸಲಹೆ ಪಡೆಯಲು ಒಂದು ಸಲಹಾ ಸಂಸ್ಥೆಯನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ. ನೀತಿ ಆಯೋಗದ ಜತೆಯೂ ಸಮಾಲೋಚನೆ ನಡೆಸುತ್ತಿದ್ದೇನೆ. ಒಳ್ಳೆಯ ದಿನ ಬರಬಹುದು. ಆಶಾವಾದಿಗಳಾಗಿರಿ ಎಂದು ಕಾರ್ಮಿಕರಿಗೆ ಭರವಸೆ ನೀಡಿದರು.

ಮೂರು ನಾಲ್ಕು ತಿಂಗಳು ಅವಕಾಶ ಕೊಡಿ. ಎಲ್ಲಾ ಹಂತಗಳಲ್ಲಿಯೂ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಪ್ರಯತ್ನಗಳು ಯಶಸ್ವಿ ಆಗಬಹುದು. ಪ್ರಧಾನಮಂತ್ರಿಗಳು ಕೈಗಾರಿಕೆಗಳ ಅಭಿವೃದ್ಧಿ ಬಗ್ಗೆ ಸ್ಪಷ್ಟ ದೂರದೃಷ್ಟಿ ಹೊಂದಿದ್ದಾರೆ. ಕಾಯಿರಿ ಎಂದು ಅವರು ಹೇಳಿದರು.

ಭಾವುಕರಾದ ಸಚಿವರು: ಸಚಿವರಿಗೆ ಮನವಿ ಸಲ್ಲಿಸಿದ ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್ ಅವರು, ಈ ಕಾರ್ಖಾನೆಯನ್ನು ನಾವು ತಾಯಿಯಂತೆ ಭಾವಿಸುತ್ತಿದ್ದೇವೆ. ನಮ್ಮ ತಾಯಿ ಈಗ ಕಾಯಿಲೆಪೀಡಿತ ಆಗಿದ್ದಾಳೆ. ದಯಮಾಡಿ ಉಳಿಸಿಕೊಡಿ ಎಂದು ಮನವಿ ಮಾಡಿದಾಗ ಕುಮಾರಸ್ವಾಮಿ ಅವರು ಭಾವುಕರಾದರು.

ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ರಾಜಕೀಯಕ್ಕೆ ಬರಬೇಕು ಅಂತಾ ಎಂದೂ ಭಾವಿಸಿದವನಲ್ಲ, ನಾನು ಮೊದಲ ಬಾರಿಗೆ ಸಂಸದ ಆಗಿದ್ದು ಆಕಸ್ಮಿಕ, ಎರಡು ಬಾರಿ ಸಿಎಂ ಆಗಿದ್ದು ಆಕಸ್ಮಿಕ. ಕೇಂದ್ರ ಸಚಿವನಾಗಿರುವುದು ಕೂಡ ಆಕಸ್ಮಿಕ. ನರೇಂದ್ರ ಮೋದಿ ಅವರು ನನಗೆ ಈ ಅವಕಾಶ ನೀಡಿದ್ದಾರೆ. ಜನರ ಸೇವೆ ಮಾಡುವ ಅವಕಾಶ ಕೊಡುವುದಕ್ಕೆ ಇಷ್ಟೆಲ್ಲಾ ಆಕಸ್ಮಿಕಗಳು ನಡೆದಿವೆ. ನನ್ನ ಪ್ರಯತ್ನ ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೊಬೋಟಿಕ್ ಯಂತ್ರಗಳಿಂದ ಹೂಗುಚ್ಛ, ಪುಷ್ಪಮಳೆ: ಜಾಲಹಳ್ಳಿಯ ಹೆಚ್​​ಎಂಟಿ ಟೂಲ್ಸ್ ಮತ್ತು ಮಷಿನ್ ಘಟಕಕ್ಕೆ ಆಗಮಿಸಿದ ಸಚಿವ ಕುಮಾರಸ್ವಾಮಿ ಅವರಿಗೆ ರೊಬೋಟಿಕ್ ಯಂತ್ರಗಳೇ ಹೂಗುಚ್ಛ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು. ಅಲ್ಲದೆ, ಆ ಯಂತ್ರಗಳೇ ಸಚಿವರ ಮೇಲೆ ಪುಷ್ಪವೃಷ್ಟಿ ಮಾಡಿದವು.

ಇದನ್ನೂ ಓದಿ: ಸುಮ್ಮನೆ ರಾಜೀನಾಮೆ ಕೊಡಲು ನನಗೆ ತಲೆ ಕೆಟ್ಟಿದ್ಯಾ? ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ - HD Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.