ETV Bharat / state

ಸಿದ್ದರಾಮಯ್ಯನವರೇ ನೀವೇ ನಮ್ಮ 'ನೀರೋ' ರಾಜ್ಯದ ಪಾಲಿನ ಝೀರೋ: ಹೆಚ್​ಡಿಕೆ ಟೀಕೆ - HD Kumaraswamy X post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮ್ ದೊರೆ ನೀರೋನಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.

hd-kumaraswamy-criticizes-karnataka-govt-for-guarantee-convention
ಸಿದ್ದರಾಮಯ್ಯನವರೇ ನೀವೇ ನಮ್ಮ 'ನೀರೋ' ರಾಜ್ಯದ ಪಾಲಿನ ಝೀರೋ: ಹೆಚ್​ಡಿಕೆ ಟೀಕೆ
author img

By ETV Bharat Karnataka Team

Published : Mar 10, 2024, 5:21 PM IST

ಬೆಂಗಳೂರು: ''ರೋಮ್ ಹೊತ್ತಿ ಉರಿಯುತ್ತಿದ್ದರೆ ಅಲ್ಲಿನ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ. ಕರ್ನಾಟಕದಲ್ಲಿ ಜನರು ಬರದಿಂದ ಕಂಗೆಟ್ಟಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀರೋನಂತೆಯೇ ವರ್ತಿಸುತ್ತಿದ್ದಾರೆ'' ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

''ರಾಜ್ಯದ ಬರ ಪರಿಸ್ಥಿತಿ ಹಾಗೂ ಜನರ ಸಂಕಷ್ಟವನ್ನು ಅಣಕಿಸುವಂತೆ ಸಿದ್ದರಾಮಯ್ಯ ಅವರ ಸರ್ಕಾರ ವರ್ತಿಸುತ್ತಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಾ ಪ್ರಚಾರದ ಜಾತ್ರೆಯಲ್ಲಿ ಮುಳುಗಿದೆ'' ಎಂದು ಹೆಚ್​ಡಿಕೆ ಎಕ್ಸ್ ಖಾತೆಯ ಪೋಸ್ಟ್​​ನಲ್ಲಿ ಆರೋಪಿಸಿದ್ದಾರೆ.

''ರಾಜ್ಯದ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ, ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು!'' ಎಂದು ಹರಿಹಾಯ್ದಿದ್ದಾರೆ.

''ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ! ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ! ರಾಜ್ಯದ ಪಾಲಿನ ಝೀರೋ! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಅದೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು'' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

''ಬರಪೀಡಿತ ರೈತರಿಗೆ ಕೊಡಲು ಈ ನಿಮ್ಮ ಸರ್ಕಾರಕ್ಕೆ ₹2000 ಗತಿ ಇಲ್ಲ. ಆದರೆ, ಗ್ಯಾರಂಟಿ ಸಮಾವೇಶಗಳಿಗೆ ಬೇಕಾದಷ್ಟು ಹಣವಿದೆ. ತುರ್ತು ಉದ್ದೇಶಕ್ಕೆ ಇರಿಸಿರುವ ಜಿಲ್ಲಾಧಿಕಾರಿ, ತಹಶೀಲ್ದಾರ್​​ಗಳ ಪಿಡಿ ಖಾತೆಗೆ ನಿಮ್ಮ ಸರ್ಕಾರ ಕನ್ನ ಹಾಕಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ!! ಹೌದಲ್ಲವೇ? ಇದೆಂಥಾ ಸಿದ್ದನಾಮಿಕ್ಸ್ ಸಿದ್ದರಾಮಯ್ಯನವರೇ?'' ಎಂದು ಮಾಜಿ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

''ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ಸುರಿದಿದ್ದಿರಿ ಸಿದ್ದರಾಮಯ್ಯನವರೇ? ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ 'ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ' ಹೊರಡಿಸಿ. ನಿಮ್ಮ ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ'' ಎಂದು ಒತ್ತಾಯಿಸಿದ್ದಾರೆ.

''ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ, ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ 'ಜಾಹೀರಾತು ಜಾತ್ರೆ'ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲವೇ?'' ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳ ಮುಖಾಮುಖಿ: ಗೀತಾ ಶಿವರಾಜ್​ಕುಮಾರ್‌ಗೆ​ ಸಿಗುವುದೇ ಗೆಲುವು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.